Publish Date: Wed, 11 Mar 2020 (17:42 IST)
Updated Date: Wed, 11 Mar 2020 (17:44 IST)
ರಾಜ್ಯದ ಉಪಚುನಾವಣೆ ಬಳಿಕ ಖಾಲಿ ಇದ್ದ ಕೆಪಿಸಿಸಿ ಅಧ್ಯಕ್ಷಸ್ಥಾನಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ರನ್ನು ಹೈಕಮಾಂಡ್ ಆಯ್ಕೆ ಮಾಡಿದೆ.
ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಕಾಂಗ್ರೆಸ್ ಪಕ್ಷಕ್ಕೆ ನೀಡಿರುವ ಕೊಡುಗೆ ಹಾಗೂ ಪಕ್ಷ ನಿಷ್ಠೆಯನ್ನು ಪರಿಗಣಿಸಿ ಡಿ.ಕೆ.ಶಿಗೆ ಹೈಕಮಾಂಡ್ ಮಣೆಹಾಕಿದೆ.
ಕಾರ್ಯಾಧ್ಯಕ್ಷರನ್ನಾಗಿ ಹಾಲಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ ಹಾಗೂ ಸಲೀಂ ಅಹ್ಮದ್ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಲಾಗಿದೆ.