Select Your Language

Notifications

webdunia
webdunia
webdunia
webdunia

ಮತಗಳ್ಳತನದ ವಿರುದ್ಧ ಸಹಿ ಸಂಗ್ರಹಿಸಿ ಎಐಸಿಸಿಗೆ ಒಪ್ಪಿಸಿದ ಡಿಕೆ ಶಿವಕುಮಾರ್

DK Shivakumar

Krishnaveni K

ನವದೆಹಲಿ , ಸೋಮವಾರ, 10 ನವೆಂಬರ್ 2025 (17:04 IST)
ನವದೆಹಲಿ: ಮತ ಕಳ್ಳತನ ವಿರುದ್ಧದ ಸಹಿ ಸಂಗ್ರಹ ಅಭಿಯಾನವನ್ನು ಕರ್ನಾಟಕದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದ್ದು, ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ಸಂಗ್ರಹಿಸಲಾದ 1,12,41,000 ಸಹಿಗಳ ದಾಖಲೆಗಳನ್ನು ಎಐಸಿಸಿಗೆ ಸಲ್ಲಿಸಿದರು.
 
ದೆಹಲಿಯಲ್ಲಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ ಶಿವಕುಮಾರ್ ಅವರ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಮುಖಂಡರ ನಿಯೋಗವು ಸಹಿ ಸಂಗ್ರಹ ದಾಖಲೆಗಳ ಒಂದು ಪೆಟ್ಟಿಗೆಯನ್ನು ಸಾಂಕೇತಿಕವಾಗಿ ಸಲ್ಲಿಸಿದರು. ನಂತರ ಉಳಿದ ಪೆಟ್ಟಿಗೆಗಳನ್ನು ಎಐಸಿಸಿ ನೂತನ ಕಟ್ಟಡ ಇಂದಿರಾ ಭವನದಲ್ಲಿ ಎಐಸಿಸಿ ಕಾರ್ಯದರ್ಶಿ ನೆಟ್ಟ ಡಿಸೋಜ ಅವರಿಗೆ ಹಸ್ತಾಂತರಿಸಲಾಯಿತು.
 
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ 40 ಜಿಲ್ಲೆಗಳಲ್ಲಿ (ರಾಜಕೀಯ ಉದ್ದೇಶಕ್ಕಾಗಿ ರಚಿಸಿಕೊಂಡಿರುವ ಜಿಲ್ಲೆಗಳು) ಸಹಿ ಸಂಗ್ರಹಿಸಲಾಗಿದೆ. ರಾಜ್ಯದಲ್ಲಿ ನಡೆದ ಅಭಿಯಾನದಲ್ಲಿ ಅತಿ ಹೆಚ್ಚು ಸಹಿ ಸಂಗ್ರಹಿಸಿದ ಜಿಲ್ಲಾಧ್ಯಕ್ಷರುಗಳು ಕೂಡ ಶಿವಕುಮಾರ್ ಅವರ ಜೊತೆಯಲ್ಲಿ ದೆಹಲಿಗೆ ಹೋಗಿ ಸಹಿ ಸಂಗ್ರಹ ದಾಖಲೆಗಳನ್ನು ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನನ್ನ ಹೆಸರಿನಲ್ಲಿ ನಕಲಿ ಸುದ್ದಿ ಪ್ರಕಟ ಮಾಡುವವರ ವಿರುದ್ಧ ಕಠಿಣ ಕ್ರಮ: ಸಿಟಿ ರವಿ