ಮತಗಳ್ಳತನದ ವಿರುದ್ಧ ಸಹಿ ಸಂಗ್ರಹಿಸಿ ಎಐಸಿಸಿಗೆ ಒಪ್ಪಿಸಿದ ಡಿಕೆ ಶಿವಕುಮಾರ್

Krishnaveni K
ಸೋಮವಾರ, 10 ನವೆಂಬರ್ 2025 (17:04 IST)
ನವದೆಹಲಿ: ಮತ ಕಳ್ಳತನ ವಿರುದ್ಧದ ಸಹಿ ಸಂಗ್ರಹ ಅಭಿಯಾನವನ್ನು ಕರ್ನಾಟಕದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದ್ದು, ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ಸಂಗ್ರಹಿಸಲಾದ 1,12,41,000 ಸಹಿಗಳ ದಾಖಲೆಗಳನ್ನು ಎಐಸಿಸಿಗೆ ಸಲ್ಲಿಸಿದರು.
 
ದೆಹಲಿಯಲ್ಲಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ ಶಿವಕುಮಾರ್ ಅವರ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಮುಖಂಡರ ನಿಯೋಗವು ಸಹಿ ಸಂಗ್ರಹ ದಾಖಲೆಗಳ ಒಂದು ಪೆಟ್ಟಿಗೆಯನ್ನು ಸಾಂಕೇತಿಕವಾಗಿ ಸಲ್ಲಿಸಿದರು. ನಂತರ ಉಳಿದ ಪೆಟ್ಟಿಗೆಗಳನ್ನು ಎಐಸಿಸಿ ನೂತನ ಕಟ್ಟಡ ಇಂದಿರಾ ಭವನದಲ್ಲಿ ಎಐಸಿಸಿ ಕಾರ್ಯದರ್ಶಿ ನೆಟ್ಟ ಡಿಸೋಜ ಅವರಿಗೆ ಹಸ್ತಾಂತರಿಸಲಾಯಿತು.
 
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ 40 ಜಿಲ್ಲೆಗಳಲ್ಲಿ (ರಾಜಕೀಯ ಉದ್ದೇಶಕ್ಕಾಗಿ ರಚಿಸಿಕೊಂಡಿರುವ ಜಿಲ್ಲೆಗಳು) ಸಹಿ ಸಂಗ್ರಹಿಸಲಾಗಿದೆ. ರಾಜ್ಯದಲ್ಲಿ ನಡೆದ ಅಭಿಯಾನದಲ್ಲಿ ಅತಿ ಹೆಚ್ಚು ಸಹಿ ಸಂಗ್ರಹಿಸಿದ ಜಿಲ್ಲಾಧ್ಯಕ್ಷರುಗಳು ಕೂಡ ಶಿವಕುಮಾರ್ ಅವರ ಜೊತೆಯಲ್ಲಿ ದೆಹಲಿಗೆ ಹೋಗಿ ಸಹಿ ಸಂಗ್ರಹ ದಾಖಲೆಗಳನ್ನು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿಯನ್ನು ನಾನು ಸ್ವಲ್ಪ ಹೆಚ್ಚು ಪ್ರೀತಿಸುತ್ತೇನೆ: ಚಿರಾಗ್ ಪಾಸ್ವಾನ್‌

ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯ ಪ್ರಕರಣ: ಗೃಹ ಸಚಿವರ ಮಹತ್ವದ ತೀರ್ಮಾನ

ಪತ್ನಿಯ ಕಿರುಕುಳ, ಮದುವೆಯಾದ 8 ತಿಂಗಳಿಗೆ ಬ್ಯಾಂಕ್ ಸಿಬ್ಬಂದಿ ಆತ್ಮಹತ್ಯೆ

ಉ.ಪ್ರದೇಶ ಶಾಲಾ, ಕಾಲೇಜುಗಳಲ್ಲಿ ವಂದೇ ಮಾತರಂ ಕಡ್ಡಾಯಗೊಳಿಸಿದ ಯೋಗಿ ಆದಿತ್ಯನಾಥ್

ಮುಸ್ಲಿಮರ ನಮಾಜ್ ಸಮರ್ಥಿಸಲು ಹೋಗಿ ಹಿಂದೂಗಳು ಬಾರ್ ನಲ್ಲಿರ್ತಾರೆ ಎಂದ ಕೈ ನಾಯಕ ಆಂಜನೇಯ

ಮುಂದಿನ ಸುದ್ದಿ
Show comments