ಬೆಂಗಳೂರು: ದೆಹಲಿಗೆ ಬಂದ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಗುಡ್ ನ್ಯೂಸ್ ಕೊಡೋದು ಯಾವಾಗ ಎಂದು ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಚರ್ಚೆಗಳು ನಡೆಯುತ್ತಲೇ ಇವೆ. ಅದರಲ್ಲೂ ಡಿಕೆ ಶಿವಕುಮಾರ್ ಮೊನ್ನೆಯೇ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ. ಇದಾದ ಬಳಿಕ ಅವರು ದೆಹಲಿಯಲ್ಲಿ ಏನು ಚರ್ಚೆ ಮಾಡಿರಬಹುದು ಎಂಬ ಕುತೂಹಲ ಎಲ್ಲರಲ್ಲಿದೆ.
ಈ ನಡುವೆ ಡಿಕೆ ಶಿವಕುಮಾರ್ ಮಾತ್ರ ನೇರವಾಗಿ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ರಾಹುಲ್, ಹೈಕಮಾಂಡ್ ನಾಯಕರ ಜೊತೆಗೆ ನನ್ನ ಮತ್ತು ಮುಖ್ಯಮಂತ್ರಿ ನಡುವೆ ಏನು ಮಾತುಕತೆ ನಡೆದಿದೆ ಎಂಬುದು ನಮಗೆ ಮಾತ್ರ ಗೊತ್ತು. ಅದನ್ನು ಸಾರ್ವಜನಿಕವಾಗಿ ಚರ್ಚೆ ಮಾಡಲ್ಲ.
ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ. ರಾಹುಲ್ ಸಮ್ಮುಖದಲ್ಲಿ ಮಾತುಕತೆ ನಡೆದಿದೆ. ಕಾಲ ಬಂದಾಗ ಎಲ್ಲವೂ ತಿಳಿಯುತ್ತದೆ. ಏಪ್ರಿಲ್ ನಲ್ಲಿ ಗುಡ್ ನ್ಯೂಸ್ ಬಗ್ಗೆ ನೋಡೋಣ ಎಂದಿದ್ದಾರೆ. ಆ ಮೂಲಕ ಏಪ್ರಿಲ್ ಗಡುವು ನೀಡಿದ್ದಾರೆ.