ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಇನ್ನೂ ತಣ್ಣಗಾಗಿಲ್ಲ. ಈ ವಿಚಾರವಾಗಿ ಡಿಕೆ ಶಿವಕುಮಾರ್ ಹೊಸ ವರ್ಷದ ಹೊಸ್ತಿಲಲ್ಲೇ ಮಹತ್ವದ ಹೇಳಿಕೆ ನೀಡಿದ್ದಾರೆ.
ಅಧಿಕಾರ ಹಂಚಿಕೆ ವಿಚಾರವಾಗಿ ಈ ವರ್ಷವಂತೂ ಯಾವುದೇ ತೀರ್ಮಾನವಾಗಿಲ್ಲ. ಎಲ್ಲಾ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ರಾಜ್ಯ ನಾಯಕರು ಹೇಳುತ್ತಿದ್ದಾರೆ. ಆದರೆ ರಾಜ್ಯ ನಾಯಕರಿಗೆ ಹೈಕಮಾಂಡ್ ಇನ್ನೂ ಯಾವುದೇ ಸ್ಪಷ್ಟತೆ ನೀಡಿಲ್ಲ.
ಮೊನ್ನೆಯಷ್ಟೇ ಡಿಕೆಶಿ ಆಪ್ತ ಶಾಸಕ ಇಕ್ಬಾಲ್ ಹುಸೇನ್ ಜನವರಿ 6 ಕ್ಕೆ ಅಥವಾ 9 ಕ್ಕೆ ಡಿಕೆ ಶಿವಕುಮಾರ್ ಸಿಎಂ ಆಗೋದು ಪಕ್ಕಾ ಎಂದಿದ್ದರು. ಅವರು ಇದು ಎರಡನೇ ಬಾರಿ ಈ ಹೇಳಿಕೆ ನೀಡುತ್ತಿದ್ದಾರೆ. ಇದರ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಇಕ್ಬಾಲ್ ಹೇಳಿಕೆಗೆಲ್ಲಾ ಬೆಲೆ ಕೊಡಬೇಡಿ ಎಂದಿದ್ದಾರೆ. ಹಾಗಿದ್ದರೆ ಹೊಸ ವರ್ಷ ನಿಮ್ಮ ನೇತೃತ್ವದ ಸರ್ಕಾರವಿರುತ್ತಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ಅವರು ಇದಕ್ಕೆಲ್ಲಾ 2026 ರಲ್ಲೇ ಉತ್ತರ ನೀಡುತ್ತೇನೆ ಎಂದು ಮಹತ್ವದ ಹೇಳಿಕೆ ನೀಡಿದ್ದಾರೆ.