Select Your Language

Notifications

webdunia
webdunia
webdunia
webdunia

ಸೋನಿಯಾ ಗಾಂಧಿ, ರಾಹುಲ್ ಗಾಂಧಿಗಾಗಿ ಮತ್ತೆ ಪ್ರತಿಭಟನೆಗೆ ಕೂತ ಕಾಂಗ್ರೆಸ್ಸಿಗರು

DK Shivakumar
ಬೆಂಗಳೂರು: ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಸುಳ್ಳು ಆರೋಪ ಹೊರಿಸಲಾಗುತ್ತಿದೆ ಎಂದು ಆರೋಪಿಸಿ ಇಂದು ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಮತ್ತೆ ಪ್ರತಿಭಟನೆ ನಡೆಸಿದೆ.

ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ರಾಹುಲ್ ಮತ್ತು ಸೋನಿಯಾ ವಿರುದ್ಧ ಯಾವುದೇ ತಪ್ಪಿಲ್ಲಿದ್ದರೂ ಸುಳ್ಳು ಕೇಸ್ ಹಾಕಲಾಗುತ್ತಿದೆ. ಮೊನ್ನೆಯಷ್ಟೇ ಇಡಿ ಎಫ್ ಐಆರ್ ಇಲ್ಲದೇ ಹಾಕಿದ್ದ ಚಾರ್ಜ್ ಶೀಟ್ ನ್ನು ನ್ಯಾಯಾಲಯ ತಳ್ಳಿ ಹಾಕಿತ್ತು. ಇದೆಲ್ಲಾ ಸೋನಿಯಾ ಮತ್ತು ಕುಟುಂಬದ ಮೇಲೆ ಮಾಡುತ್ತಿರುವ ಪಿತೂರಿ ಎಂದು ಆರೋಪಿಸಿ ಕಾಂಗ್ರೆಸ್ ಇಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದೆ.

ಈ ವೇಳೆ ನರೇಗಾ ಯೋಜನೆ ಹೆಸರು ಬದಲಾವಣೆಯಲ್ಲಿ ಮಹಾತ್ಮ ಗಾಂಧೀಜಿ ಅವರ ಹೆಸರು ಕೈಬಿಟ್ಟು ಅವಮಾನ ಮಾಡಿರುವುದನ್ನು ಖಂಡಿಸಲಾಗಿದೆ. ಬಿತ್ತಿ ಪತ್ರಗಳನ್ನು ಹಿಡಿದು ಕಾಂಗ್ರೆಸ್ ನಾಯಕರು ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಮೊನ್ನೆಯಷ್ಟೇ ಬೆಳಗಾವಿಯಲ್ಲಿ ಸುವರ್ಣ ಸೌಧದ ಮುಂದೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನ ಎಲ್ಲಾ ನಾಯಕರು ಇದೇ ವಿಚಾರವಾಗಿ ಪ್ರತಿಭಟನೆ ನಡೆಸಿದ್ದರು.


Share this Story:

Follow Webdunia kannada

ಮುಂದಿನ ಸುದ್ದಿ

ಪಶ್ಚಿಮ ಬಂಗಾಳದ ನಾಡಿಯಾದಲ್ಲಿ ಲ್ಯಾಂಡ್ ಆಗಬೇಕಿದ್ದ ಮೋದಿ, ಕೋಲ್ಕತ್ತಾದಲ್ಲಿ ಇಳಿದಿದ್ಯಾಕೆ