Publish Date: Tue, 06 Feb 2018 (17:30 IST)
Updated Date: Tue, 06 Feb 2018 (17:34 IST)
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಗಿಮಿಕ್ ರಾಜಕಾರಣ ಮಾಡುತ್ತಿದ್ದು, ಅವರು ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಕಂಪ್ಲಿ ಶಾಸಕ ಸುರೇಶಬಾಬು ಟೀಕಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿಯಿಂದ ರಾಜಕೀಯ ಜೀವನ ಆರಂಭಿಸಿದ್ದು, ಕೊನೆ ಉಸಿರು ಇರುವವರೆಗೂ ಬಿಜೆಪಿಯಲ್ಲೇ ಇರುತ್ತೇನೆ. ಕಾಂಗ್ರೆಸ್ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬಿ.ಶ್ರೀರಾಮುಲು ಹಾಗೂ ಜನಾರ್ದನರೆಡ್ಡಿ ಅವರು ನನಗೆ ಎರಡು ಕಣ್ಣುಗಳಿದ್ದಂತೆ. ನಾನು ಇತರರಂತೆ ಪಕ್ಷಕ್ಕೆ ದ್ರೋಹ ಮಾಡಲ್ಲ. ಬಿಜೆಪಿಯಲ್ಲೇ ಇರುತ್ತೇನೆ, ಪಕ್ಷ ನೀಡುವ ಜವಾಬ್ದಾರಿ ವಹಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.