Select Your Language

Notifications

webdunia
webdunia
webdunia
Monday, 21 April 2025
webdunia

‘ಸದ್ಯದಲ್ಲೇ ಸಚಿವ ಡಿಕೆಶಿ ರಾಜೀನಾಮೆ ಕೊಡುವ ಪರಿಸ್ಥಿತಿ ಬರುತ್ತೆ’

ಬಿಎಸ್ ಯಡಿಯೂರಪ್ಪ
ಬೆಂಗಳೂರು , ಮಂಗಳವಾರ, 14 ನವೆಂಬರ್ 2017 (11:18 IST)
ಬೆಂಗಳೂರು: ಸದ್ಯದಲ್ಲೇ ಇಂಧನ ಸಚಿವ ಡಿಕೆ ಶಿವಕುಮಾರ್ ರಾಜೀನಾಮೆ ನೀಡುವ ಪರಿಸ್ಥಿತಿ ಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

 
ಮುರುಡೇಶ್ವರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ‘ಸಚಿವ ಡಿಕೆಶಿ ಮನೆ ಮೇಲೆ ಐಟಿ ದಾಳಿ ನಡೆದಿದೆ. ಅವರ ಕುಟುಂಬದವರನ್ನೂ ವಿಚಾರಣೆ ನಡೆಸಲಾಗಿದೆ. ಸಾಕಷ್ಟು ಅಕ್ರಮ ಆಸ್ತಿ ಪತ್ತೆಯಾಗಿದೆ. ಐಟಿ ಇಲಾಖೆ ಈ ಪ್ರಕರಣವನ್ನು ಜಾರಿ ನಿರ್ದೇಶನಾಲಯಕ್ಕೆ ವರ್ಗಾಯಿಸಬಹುದು. ಆಗ ಅನಿವಾರ್ಯವಾಗಿ ಅವರೇ ರಾಜೀನಾಮೆ ನೀಡಬೇಕಾಗಬಹುದು’ ಎಂದು ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.

ಬಿಜೆಪಿ ಪರಿವರ್ತನಾ ರ್ಯಾಲಿ ಹಿನ್ನಲೆಯಲ್ಲಿ ಮುರುಡೇಶ್ವರದಲ್ಲಿ ಸುದ್ದಿಗೋಷ್ಠಿ ನಡೆಸಿದ ಯಡಿಯೂರಪ್ಪ, ನಾವಾಗಿಯೇ ಯಾರೂ ಡಿಕೆಶಿ ರಾಜೀನಾಮೆ ಕೊಡಲು ಒತ್ತಾಯಿಸುವ ಅಗತ್ಯವಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕೆಜೆ ಜಾರ್ಜ್ ರಾಜೀನಾಮೆಗೆ ಮುಗಿಬಿದ್ದ ಬಿಜೆಪಿ