Select Your Language

Notifications

webdunia
webdunia
webdunia
webdunia

ತಡರಾತ್ರಿ ದೆಹಲಿಯಲ್ಲಿ ಡಿಕೆ ಶಿವಕುಮಾರ್ ಮಹತ್ವದ ಕಾರ್ಯಾಚರಣೆ

DK Shivakumar
ನವದೆಹಲಿ: ದೆಹಲಿಗೆ ತೆರಳಿರುವ ಡಿಸಿಎಂ ಡಿಕೆ ಶಿವಕುಮಾರ್ ತಡರಾತ್ರಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಮೂಲಕ ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ.

ಅಸ್ಸಾಂ ಚುನಾವಣೆ ತಯಾರಿ ಸಭೆಗೆ ಹಾಜರಾಗುವ ನೆಪದಲ್ಲಿ ದೆಹಲಿಗೆ ತೆರಳಿದ್ದ ಡಿಕೆ ಶಿವಕುಮಾರ್ ನಾಯಕತ್ವ ಬದಲಾವಣೆ ವಿಚಾರವಾಗಿಯೂ ಹೈಕಮಾಂಡ್ ಜೊತೆ ಚರ್ಚೆ ನಡೆಸಲು ತೀರ್ಮಾನಿಸಿದ್ದಾರೆ. ಅದರಂತೆ ಎರಡು ದಿನ ದೆಹಲಿಯಲ್ಲೇ ಬೀಡುಬಿಟ್ಟಿರುವ ಡಿಸಿಎಂ ನಿನ್ನೆ ತಡರಾತ್ರಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದಾರೆ.

ನಿನ್ನೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರನ್ನು ತಡರಾತ್ರಿ ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಡಿಕೆ ಶಿವಕುಮಾರ್ ಗೆ ಸಹೋದರ ಡಿಕೆ ಸುರೇಶ್ ಕೂಡಾ ಸಾಥ್ ನೀಡಿದ್ದಾರೆ.

ಈ ವೇಳೆ ಏನು ಮಾತುಕತೆಯಾಗಿದೆ ಎಂಬುದು ಬಹಿರಂಗವಾಗಿಲ್ಲ. ಆದರೆ ಸದ್ಯಕ್ಕೆ ಸಂಸತ್ ಕಲಾಪ ನಡೆಯುತ್ತಿರುವುದರಿಂದ ರಾಹುಲ್ ಗಾಂಧಿ ಭೇಟಿ ಮಾಡಲು ಸಾಧ್ಯವಾಗಿಲ್ಲ ಎನ್ನಲಾಗುತ್ತಿದೆ. ಇದನ್ನು ಡಿಕೆ ಶಿವಕುಮಾರ್ ಕೂಡಾ ನಿನ್ನೆ ಸ್ಪಷ್ಟಪಡಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

Karnataka weather: ರಾಜ್ಯದಲ್ಲಿ ಇಂದು ವಿಪರೀತ ಬಿಸಿಲು, ಹವಾಮಾನ ವರದಿ ಇಲ್ಲಿದೆ