Publish Date: Mon, 29 Oct 2018 (14:00 IST)
Updated Date: Mon, 29 Oct 2018 (14:06 IST)
ಬಳ್ಳಾರಿ : ರಾಜ್ಯ ಲೋಕಸಭಾ ಉಪಚುನಾವಣೆ ಹಿನ್ನಲೆಯಲ್ಲಿ ಪ್ರಚಾರಕ್ಕೆ ಬಳ್ಳಾರಿ ತೆರಳಿದ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಜಿಲ್ಲೆಯ ವಿಮ್ ಆಸ್ಪತ್ರೆಯ ಶವಾಗಾರದಲ್ಲಿಟ್ಟ ಮೂರು ಶವಗಳ ಪಾದ ಮುಟ್ಟಿ ನಮಸ್ಕರಿಸಿದ್ದಾರೆ.
ಭಾನುವಾರದಂದು ಕೊರ್ಲಗುಂದಿ ಗ್ರಾಮದ ಹೊರವಲಯದಲ್ಲಿದ್ದ ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಮೃತಪಟ್ಟಿದ್ದರು. ಅವರ ಶವಗಳನ್ನು ವಿಮ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿತ್ತು.
ಬಳ್ಳಾರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಸಚಿವ ಡಿ.ಕೆ. ಶಿವಕುಮಾರ್ ಅವರು ಇಂದು ಜಿಲ್ಲೆಯ ವಿಮ್ಸ್ ಆವರಣದ ಶವಾಗಾರಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ ಇದ್ದ ಮೂರು ಮಕ್ಕಳ ಅಂತಿಮ ದರ್ಶನ ಪಡೆದ ಶಿವಕುಮಾರ್ ಆ ವೇಳೆ ಮೂರು ಶವಗಳ ಪಾದ ಮುಟ್ಟಿ ನಮಸ್ಕರಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ