Publish Date: Wed, 03 Jun 2026 (15:11 IST)
Updated Date: Wed, 03 Jun 2026 (15:13 IST)
ಬೆಂಗಳೂರು: ಇನ್ನೇನು ಡಿಕೆ ಶಿವಕುಮಾರ್ ಅವರು ರಾಜ್ಯದ ಸಿಎಂ ಆಗಿ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ ಶುರುವಾಗಿದ್ದು, ಇದೀಗ ತಾಯಿಯ ಆಶೀರ್ವಾದ ಪಡೆದು ಮನೆಯಿಂದ ಲೋಕಭವನಕ್ಕೆ ಹೊರಟಿದ್ದಾರೆ. ತಾಯಿ ಅಂದರೆ ಡಿಕೆ ಶಿವಕುಮಾರ್ ಬಹಳ ಪ್ರೀತಿ.
ಇಂದು ಬೆಳಗ್ಗೆಯಿಂದಲೇ ಡಿಕೆ ಶಿವಕುಮಾರ್ ರಾಜ್ಯದ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ದೇವೇಗೌಡ, ಬಿಜೆಪಿ ವರಿಷ್ಠ ಬಿಎಸ್ ಯಡಿಯೂರಪ್ಪ ಅವರ ಮನೆಗೆ ತೆರಳಿ ಆಶೀರ್ವಾದವನ್ನು ಪಡೆದಿದ್ದಾರೆ.
ಇನ್ನೂ ಮಗ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆ ಡಿಕೆ ಶಿವಕುಮಾರ್ ಅವರ ಮನೆಗೆ ಆಗಮಿಸಿದ್ದಾರೆ. ಇದೀಗ ತಾಯಿಯ ಆಶೀರ್ವಾದ ಪಡೆದು ಲೋಕಭವನದ ಕಡೆ ಡಿಕೆ ಶಿವಕುಮಾರ್ ತೆರಳಿದ್ದಾರೆ.
ಇನ್ನೂ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ನಾಯಕ ಕೆಎಲ್ ರಾಹುಲ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮಿಸಿದ್ದಾರೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ