Publish Date: Fri, 19 Dec 2025 (15:41 IST)
Updated Date: Fri, 19 Dec 2025 (15:43 IST)
ಕಾರವಾರ: ಸಿಎಂ ಕುರ್ಚಿ ಗುದ್ದಾಟಕ್ಕೆ ಸದ್ಯ ಬ್ರೇಕ್ ಬಿದ್ದ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಸಿಎಂ ಕುರ್ಚಿ ವಿಚಾರವಾಗಿ ನನ್ನ ಮತ್ತು ಸಿದ್ದರಾಮಯ್ಯ ನಡುವೆ ಒಪ್ಪಂದ ಆಗಿರುವುದು ನಿಜ. ಅದರಂತೆ ಇಬ್ಬರೂ ಸೇರಿ ಹೈಕಮಾಂಡ್‌ನ್ನು ಒಪ್ಪಿಸಿದ್ದೇವೆ ಎಂದು ಹೇಳಿದರು.
ಅಂಕೋಲಾದ ಆಂದ್ಲೆ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಐದು ವರ್ಷದ ಅವಧಿ ಪೂರ್ಣಗೊಳಿಸುವುದಿಲ್ಲ ಎಂದು ನಾನೆಂದೂ ಹೇಳಿಲ್ಲ. ಸಿದ್ದರಾಮಯ್ಯ ಪರ ಹೈಕಮಾಂಡ್ ಇದ್ದ ಕಾರಣ ಅವರು ಸಿಎಂ ಆಗಿದ್ದಾರೆ ಎಂದು ಸ್ಪಷ್ಟಣೆ ನೀಡಿದರು.
ಹೈಕಮಾಂಡ್ ಸೂಚನೆಯಂತೆ ನಾವಿಬ್ಬರೂ ಮಾತುಕತೆ ನಡೆಸಿ, ಒಟ್ಟಾಗಿ ಸಾಗುತ್ತೇವೆ ಎಂದರು.
ಐದು ವರ್ಷಗಳ ಹಿಂದೆ ಆಂದ್ಲೆ ಜಗದೀಶ್ವರಿ ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿ, ಇಷ್ಟಾರ್ಥಕ್ಕೆ ಪ್ರಾರ್ಥಿಸಿದ್ದೆ. ಪ್ರಾರ್ಥನೆ ಫಲಿಸಿತ್ತು. ಮತ್ತೆ ಇಲ್ಲಿಗೆ ಬಂದಿದ್ದೇನೆ ಎಂದರು.