Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ಸಂಪುಟದಲ್ಲಿ ಯಾರೆಲ್ಲಾ ಸಚಿವರಿರುತ್ತಾರೆ: ಪಟ್ಟಿ ಇಲ್ಲಿದೆ

ಕೃಷ್ಣವೇಣಿ ಕೆ
ಬುಧವಾರ, 3 ಜೂನ್ 2026 (09:32 IST)
ಬೆಂಗಳೂರು: ಡಿಕೆ ಶಿವಕುಮಾರ್ ಸಂಪುಟದಲ್ಲಿ ಯಾರೆಲ್ಲಾ ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಬಗ್ಗೆ ಪಟ್ಟಿ ಇಲ್ಲಿದೆ. ಅಧಿಕೃತವಾಗಿ ಕೆಲವೇ ಕ್ಷಣಗಳಲ್ಲಿ ಪಟ್ಟಿ ಬಿಡುಗಡೆಯಾಗಲಿದೆ.

ಮೊದಲ ಪಟ್ಟಿಯಲ್ಲಿ 10 ಶಾಸಕರ ಹೆಸರು ಅಂತಿಮವಾಗಿದೆ. ಇವರಲ್ಲಿ ಬಹುತೇಕರು ಸಿದ್ದರಾಮಯ್ಯ ಕ್ಯಾಬಿನೆಟ್ ನಲ್ಲಿ ಸಚಿವರಾಗಿದ್ದವರೇ. ಯುಟಿ ಖಾದರ್ ಮಾತ್ರ ಹೊಸದಾಗಿ ಸೇರ್ಪಡೆಯಾಗಿದ್ದಾರೆ. ಮೊದಲ ಪಟ್ಟಿಯಲ್ಲಿ ಸಿದ್ದರಾಮಯ್ಯ ಆಪ್ತ ಜಮೀರ್ ಅಹ್ಮದ್ ಸ್ಥಾನ ಪಡೆದಿಲ್ಲ ಎನ್ನುವುದು ವಿಶೇಷ.

ಬೆಂಗಳೂರಿನ ಕೋಟಾದಲ್ಲಿ ರಾಮಲಿಂಗಾ ರೆಡ್ಡಿ ಮತ್ತು ಕೃಷ್ಣಭೈರೇಗೌಡಗೆ ಸ್ಥಾನ ಸಿಕ್ಕಿದೆ. ಕರಾವಳಿ ಕೋಟಾದಲ್ಲಿ ಯುಟಿ ಖಾದರ್ ಗೆ ಸ್ಥಾನ ನೀಡಲಾಗಿದೆ. ಹಿರಿಯರು ಎಂಬ ಕಾರಣಕ್ಕೆ ಕೆಎಚ್ ಮುನಿಯಪ್ಪ, ಡಾ ಜಿ ಪರಮೇಶ್ವರ್, ಬಿಕೆ ಹರಿಪ್ರಸಾದ್ ಸ್ಥಾನ ಪಡೆದಿದ್ದಾರೆ. ಸದ್ಯಕ್ಕೆ ಹೊಸ ಮುಖ ಎಂದರೆ ಬಿಕೆ ಹರಿಪ್ರಸಾದ್ ಮತ್ತು ಯುಟಿ ಖಾದರ್ ಮಾತ್ರ. ಉಳಿದಂತೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಕೂಡಾ ಮೊದಲ ಬಾರಿಗೆ ಸಂಪುಟದಲ್ಲಿ ಸ್ಥಾನ ಪಡೆಯುತ್ತಿದ್ದಾರೆ. ಇವರ ಜೊತೆಗೆ ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ ಮತ್ತೆ ಸಂಪುಟ ಸೇರಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಜೊತೆ ಬರ್ತೀಯಾ, 2000 ರೂ ಕೊಡ್ತೀನಿ ಎಂದು ಹುಡುಗಿಗೆ ಕಾಟ ಕೊಟ್ಟ: ಮುಂದೇನಾಯ್ತು Video

ವಿದ್ಯುತ್ ಕಂಬ ಅಳವಡಿಸುವಾಗ ದುರಂತ: ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಬಡ ಕಾರ್ಮಿಕ Video

Karnataka Weather: ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ

ಶಾಂತಿಯುತ ಪ್ರತಿಭಟನೆ ನಮ್ಮ ಹಕ್ಕು: ರಾಹುಲ್ ಗಾಂಧಿ

ಮಾಜಿ ಗ್ರಾ.ಪಂ ಅಧ್ಯಕ್ಷ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments