ಬೆಂಗಳೂರು: ಹೇಗಾದರೂ ಮಾಡಿ ಸಿಎಂ ಪಟ್ಟಕ್ಕೇರಲು ಡಿಕೆ ಶಿವಕುಮಾರ್ ತೆರೆಮರೆಯಲ್ಲೇ ಶತಪ್ರಯತ್ನ ನಡೆಸುತ್ತಿದ್ದಾರೆ. ಇದರ ನಡುವೆ ಡಿಕೆಶಿ ಹೊಸ ದಾಳ ಉರುಳಿಸಿದ್ದಾರೆ ಎನ್ನಲಾಗಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರೆ ವರ್ಷ ತುಂಬಿದ ಬೆನ್ನಲ್ಲೇ ಸಿಎಂ ಬದಲಾವಣೆ ವಿಚಾರ ಭಾರೀ ಸದ್ದು ಮಾಡುತ್ತಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಐದು ವರ್ಷವೂ ನಾನೇ ಸಿಎಂ ಆಗಿರಲಿದ್ದೇನೆ ಎಂದಿದ್ದಾರೆ. ಇದರ ನಡುವೆ ಡಿಕೆಶಿ ಈಗ ಶಾಸಕರ ಬೆಂಬಲ ಪಡೆಯಲು ಮುಂದಾಗಿದ್ದಾರೆ.
ಇಂದು ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿಗೆ ಬಂದಿದ್ದು, ಅವರನ್ನು ಸಿದ್ದರಾಮಯ್ಯ ಮತ್ತು ಡಿಕೆಶಿ ಪ್ರತ್ಯೇಕವಾಗಿ ಭೇಟಿ ಮಾಡುತ್ತಿದ್ದಾರೆ. ಇದರ ನಡುವೆ ಡಿಕೆಶಿ ಶಾಸಕರ ಬೆಂಬಲ ಪಡೆಯಲು ಮುಂದಾಗಿದ್ದಾರೆ. ತಮ್ಮ ಪರ ನಿಲ್ಲುವಂತೆ ಶಾಸಕರಿಗೆ ಮನವಿ ಮಾಡುತ್ತಿದ್ದ ಸಹಿ ಪಡೆಯುತ್ತಿದ್ದಾರೆ. ಶಾಸಕರ ಬೆಂಬಲ ತಮಗಿದೆ ಎಂದು ಸಹಿ ಮೂಲಕ ಹೈಕಮಾಂಡ್ ಗೆ ಸಂದೇಶ ರವಾನಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ನಿನ್ನೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ವಿನಯ್ ಕುಲಕರ್ಣಿ ಮತ್ತು ವೀರೇಂದ್ರ ಪಪ್ಪಿಯವರನ್ನು ಭೇಟಿ ಮಾಡಿದ್ದರು ಎನ್ನಲಾಗುತ್ತಿದೆ.