ಬೆಂಗಳೂರು: ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದೇ ಕಾಂಗ್ರೆಸ್ ಅಜೆಂಡಾನಾ ಎಂದು ಪತ್ರಕರ್ತರೊಬ್ಬರು ಕೇಳಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಮುಖ ತಿರುಗುಸಿ ಹೋಗಿಯೇ ಬಿಟ್ಟಿದ್ದಾರೆ.
ಮಾಧ್ಯಮಗಳ ಜೊತೆ ಡಿಕೆ ಶಿವಕುಮಾರ್ ಮಾತನಾಡುತ್ತಿದ್ದರು. ಈ ವೇಳೆ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿತ್ತು. ಕೊನೆಯಲ್ಲಿ ಅವರಿಗೆ ಕುಂಭಮೇಳದ ಬಗ್ಗೆ ಇತ್ತೀಚೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ್ದ ಹೇಳಿಕೆ ಪ್ರಸ್ತಾಪಿಸಿ ಪ್ರಶ್ನೆ ಮಾಡಲಾಯಿತು.
ಮೊದಲು ಪತ್ರಿಕಾಗೋಷ್ಠಿಯಲ್ಲಿ ಹಲವು ವಿಚಾರಗಳ ಬಗ್ಗೆ ಡಿಕೆಶಿ ಸಮಾಧಾನದಿಂದಲೇ ಉತ್ತರಿಸುತ್ತಿದ್ದರು. ಮೆಟ್ರೋ ದರ ಹೆಚ್ಚಳ, ಮೈಕ್ರೋ ಫೈನಾನ್ಸ್ ಕಿರುಕುಳದ ಬಗ್ಗೆ ಸಾಕಷ್ಟು ಪ್ರಶ್ನೆಗಳಿಗೆ ಅವರು ಉತ್ತರ ನೀಡಿದ್ದಾರೆ.
ಕೊನೆಯಲ್ಲಿ ಪತ್ರಕರ್ತರೊಬ್ಬರು ಹಿಂದೂಗಳ ಭಾವನೆಗೆ ಧಕ್ಕೆ ತರುವುದೇ ಕಾಂಗ್ರೆಸ್ ಅಜೆಂಡಾನಾ ಎಂದು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಡಿಕೆ ಶಿವಕುಮಾರ್ ಮುಖ ತಿರುಗಿಸಿ ಕ್ಯಾಮರಾ ಕಡೆಗೆ ಬೆನ್ನು ಮಾಡಿ ಹೊರಟೇ ಬಿಟ್ಟರು.