ಹಿಂದೂಗಳ ಭಾವನೆಗೆ ಧಕ್ಕೆ ತರುವುದೇ ಕಾಂಗ್ರೆಸ್ ಅಜೆಂಡಾನಾ ಎಂದು ಕೇಳಿದಕ್ಕೆ ಮುಖ ತಿರುಗಿಸಿ ಹೋದ ಡಿಕೆ ಶಿವಕುಮಾರ್

Krishnaveni K
ಶುಕ್ರವಾರ, 31 ಜನವರಿ 2025 (10:03 IST)
ಬೆಂಗಳೂರು: ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದೇ ಕಾಂಗ್ರೆಸ್ ಅಜೆಂಡಾನಾ ಎಂದು ಪತ್ರಕರ್ತರೊಬ್ಬರು ಕೇಳಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಮುಖ ತಿರುಗುಸಿ ಹೋಗಿಯೇ ಬಿಟ್ಟಿದ್ದಾರೆ.

ಮಾಧ್ಯಮಗಳ ಜೊತೆ ಡಿಕೆ ಶಿವಕುಮಾರ್ ಮಾತನಾಡುತ್ತಿದ್ದರು. ಈ ವೇಳೆ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿತ್ತು. ಕೊನೆಯಲ್ಲಿ ಅವರಿಗೆ ಕುಂಭಮೇಳದ ಬಗ್ಗೆ ಇತ್ತೀಚೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ್ದ ಹೇಳಿಕೆ ಪ್ರಸ್ತಾಪಿಸಿ ಪ್ರಶ್ನೆ ಮಾಡಲಾಯಿತು.

ಮೊದಲು ಪತ್ರಿಕಾಗೋಷ್ಠಿಯಲ್ಲಿ ಹಲವು ವಿಚಾರಗಳ ಬಗ್ಗೆ ಡಿಕೆಶಿ ಸಮಾಧಾನದಿಂದಲೇ ಉತ್ತರಿಸುತ್ತಿದ್ದರು. ಮೆಟ್ರೋ ದರ ಹೆಚ್ಚಳ, ಮೈಕ್ರೋ ಫೈನಾನ್ಸ್ ಕಿರುಕುಳದ ಬಗ್ಗೆ ಸಾಕಷ್ಟು ಪ್ರಶ್ನೆಗಳಿಗೆ ಅವರು ಉತ್ತರ ನೀಡಿದ್ದಾರೆ.

ಕೊನೆಯಲ್ಲಿ ಪತ್ರಕರ್ತರೊಬ್ಬರು ಹಿಂದೂಗಳ ಭಾವನೆಗೆ ಧಕ್ಕೆ ತರುವುದೇ ಕಾಂಗ್ರೆಸ್ ಅಜೆಂಡಾನಾ ಎಂದು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಡಿಕೆ ಶಿವಕುಮಾರ್ ಮುಖ ತಿರುಗಿಸಿ ಕ್ಯಾಮರಾ ಕಡೆಗೆ ಬೆನ್ನು ಮಾಡಿ ಹೊರಟೇ ಬಿಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿದ್ದರಾಮಯ್ಯಗೆ ತಾಕತ್ತಿದ್ದರೆ ಕುರಾನ್, ಬೈಬಲ್ ಬಗ್ಗೆ ಇಂತಹ ಹೇಳಿಕೆ ನೀಡಲಿ: ಕೆಎಸ್ ಈಶ್ವರಪ್ಪ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೊಂದು ಕಾರಣ ಸಾಕು

ಮುಂದಿನ ಸುದ್ದಿ
Show comments