ಬೆಂಗಳೂರು: ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ ಆಗಿ ಪದಗ್ರಹಣ ಮಾಡಲಿದ್ದಾರೆ ಎಂಬ ಶಾಸಕ ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿಯೇ ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಇಕ್ಬಾಲ್ ಹುಸೇನ್, ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡುವುದೇ ನಮ್ಮ ಗುರಿ. ಅವರು ಜನವರಿ 6 ಕ್ಕೆ ಮುಖ್ಯಮಂತ್ರಿಯಾಗುವುದು ಪಕ್ಕಾ ಎಂದಿದ್ದರು. ಅವರ ಹೇಳಿಕೆ ಸಂಚಲನ ಸೃಷ್ಟಿಸಿತ್ತು.
ಇದರ ಬೆನ್ನಲ್ಲೇ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು ಇಕ್ಬಾಲ್ ಹುಸೇನ್ ಮಾತನ್ನು ಯಾರೂ ನಂಬಲು ಹೋಗಬೇಡಿ. ಆತನಿಗೆ ಮಾತಿನ ಚಟ. ಆತನ ವಿರುದ್ಧ ಮೊದಲು ಕ್ರಮ ಕೈಗೊಳ್ಳಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ಇಕ್ಬಾಲ್ ಹುಸೇನ್ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂದು ಸಂಚಲನ ಸೃಷ್ಟಿಸಿದ್ದರು. ಆಗ ಕೆಪಿಸಿಸಿ ಶಿಸ್ತು ಸಮಿತಿ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಇದೀಗ ಮತ್ತೆ ಪದೇ ಪದೇ ಅದೇ ಹೇಳಿಕೆ ನೀಡುತ್ತಿದ್ದಾರೆ.