ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

Krishnaveni K
ಶನಿವಾರ, 13 ಡಿಸೆಂಬರ್ 2025 (17:28 IST)
ಬೆಂಗಳೂರು: ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ ಆಗಿ ಪದಗ್ರಹಣ ಮಾಡಲಿದ್ದಾರೆ ಎಂಬ ಶಾಸಕ ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿಯೇ ಪ್ರತಿಕ್ರಿಯೆ ನೀಡಿದ್ದಾರೆ.

ಇಂದು ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಇಕ್ಬಾಲ್ ಹುಸೇನ್, ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡುವುದೇ ನಮ್ಮ ಗುರಿ. ಅವರು ಜನವರಿ 6 ಕ್ಕೆ ಮುಖ್ಯಮಂತ್ರಿಯಾಗುವುದು ಪಕ್ಕಾ ಎಂದಿದ್ದರು. ಅವರ ಹೇಳಿಕೆ ಸಂಚಲನ ಸೃಷ್ಟಿಸಿತ್ತು.

ಇದರ ಬೆನ್ನಲ್ಲೇ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು ‘ಇಕ್ಬಾಲ್ ಹುಸೇನ್ ಮಾತನ್ನು ಯಾರೂ ನಂಬಲು ಹೋಗಬೇಡಿ. ಆತನಿಗೆ ಮಾತಿನ ಚಟ. ಆತನ ವಿರುದ್ಧ ಮೊದಲು ಕ್ರಮ ಕೈಗೊಳ್ಳಬೇಕು’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಇಕ್ಬಾಲ್ ಹುಸೇನ್ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂದು ಸಂಚಲನ ಸೃಷ್ಟಿಸಿದ್ದರು. ಆಗ ಕೆಪಿಸಿಸಿ ಶಿಸ್ತು ಸಮಿತಿ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಇದೀಗ ಮತ್ತೆ ಪದೇ ಪದೇ ಅದೇ ಹೇಳಿಕೆ ನೀಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ದಲಿತರಿಗೆ ಮೀಸಲಾಗಿದ್ದ 25,000 ಕೋಟಿ ಗ್ಯಾರಂಟಿಗೆ ಬಳಕೆ: ಒಪ್ಪಿಕೊಂಡ ಸಚಿವ ಮಹದೇವಪ್ಪ

ಮುಂದಿನ ಸುದ್ದಿ
Show comments