Publish Date: Thu, 26 Dec 2024 (12:07 IST)
Updated Date: Thu, 26 Dec 2024 (12:13 IST)
ಬೆಳಗಾವಿ: ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ.
ಎಲ್ಲಾ ಕಾಂಗ್ರೆಸ್ ನಾಯಕರು ಗಾಂಧಿ ಟೋಪಿ ಧರಿಸಿಕೊಂಡು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಗಾಂಧಿ ಸ್ಟೈಲಲ್ಲಿ ಚರಕದ ಮುಂದೆ ಕೂತು ಫೋಟೋಗೆ ಪೋಸ್ ಕೊಟ್ಟರು. ಅವರಿಗೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ನಾಯಕರೂ ಸಾಥ್ ಕೊಟ್ಟಿದ್ದಾರೆ.
ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ದೇಶದ ವಿವಿದೆಡೆಯಿಂದ ಕಾಂಗ್ರೆಸ್ ನಾಯುಕರು ಬಂದಿದ್ದಾರೆ. ಇದೇ ವೇಳೆ ಬೆಳಗಾವಿಯ ವೀರಸೌಧದಲ್ಲಿ ಗಾಂಧೀಜಿ ಪ್ರತಿಮೆ ಅನಾವರಣಗೊಳಿಸಲಾಯಿತು. ಬಳಿಕ ಕಾಂಗ್ರೆಸ್ ನಾಯಕರು ಪ್ರತಿಮೆ ಎದುರು ಫೋಟೋ ಸೆಷನ್ ನಡೆಸಿದರು.
ಇದಾದ ಬಳಿಕ ಸಿಎಂ ಸಿದ್ದರಾಮಯ್ಯ ಖಾದಿ ಉತ್ಸವಕ್ಕೆ ಚಾಲನೆ ನೀಡಿದರು. ಈ ವೇಳೆ ಡಿಸಿಎಂ ಚರಕದ ಮುಂದೆ ಕುಳಿತು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಬಳಿಕ ಸಿಎಂ ಸಿದ್ದರಾಮಯ್ಯ ಕೂಡಾ ಚರಕ ತಿರುಗಿಸಿ ಸಂಭ್ರಮಿಸಿದ್ದಾರೆ.