Publish Date: Mon, 30 Jun 2025 (13:14 IST)
Updated Date: Mon, 30 Jun 2025 (13:17 IST)
ಬೆಂಗಳೂರು: ನಾವು ಒಂದಾಗಿಯೇ ಇದ್ದೇವೆ, ನಮ್ಮ ಸರ್ಕಾರ ಐದು ವರ್ಷ ಸುಭದ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕೈ ಎತ್ತಿ ಮಾಧ್ಯಮಗಳ ಮುಂದೆ ಡಿಸಿಎಂ ಡಿಕೆ ಶಿವಕುಮಾರ್ ಒಗ್ಗಟ್ಟು ಪ್ರದರ್ಶಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ರಾಜ್ಯ ಕಾಂಗ್ರೆಸ್ ನಲ್ಲಿ ಗೊಂದಲದ ವಾತಾವರಣವಿದೆ. ಇಬ್ಬರು ಶಾಸಕರು ಸರ್ಕಾರದ ವಿರುದ್ಧವೇ ಅಸಮಾಧಾನ ಹೊರಹಾಕಿದ್ದರೆ, ಮತ್ತೊಬ್ಬರು ಸೆಪ್ಟೆಂಬರ್ ಬಳಿಕ ಕ್ರಾಂತಿಯಾಗಲಿದೆ ಎಂದಿದ್ದರು. ಇನ್ನೊಬ್ಬರು ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದಿದ್ದರು.
ಈ ಬೆಳವಣಿಗೆ ಬಗ್ಗೆ ಇಂದು ಮಾಧ್ಯಮಗಳ ಮುಂದೆ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಕೈ ಎತ್ತಿ ಹಿಡಿದ ಡಿಕೆಶಿ, ನಾವು ಒಗ್ಗಟ್ಟಾಗಿಯೇ ಇದ್ದೇವೆ, ನಮ್ಮ ಸರ್ಕಾರ ಬಂಡೆ ರೀತಿ 5 ವರ್ಷ ಇರಲಿದೆ ಎಂದಿದ್ದಾರೆ.
ಇನ್ನು ಸುರ್ಜೇವಾಲ ಭೇಟಿ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಅವರು ರಾಜ್ಯದ ಉಸ್ತುವಾರಿ. ಕಾಂಗ್ರೆಸ್ ನಾಯಕರ ಕಷ್ಟ ಸುಖ ಕೇಳಲು ಬರ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.