Publish Date: Sat, 07 Feb 2026 (09:55 IST)
Updated Date: Sat, 07 Feb 2026 (09:59 IST)
ಮಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಚರ್ಚೆಯಾಗುತ್ತಿದೆ. ಬಜೆಟ್ ಬಳಿಕ ಸಿಎಂ ಆಗ್ತೀರಾ ಎಂಬ ಪ್ರಶ್ನೆಗೆ ಡಿಸಿಎಂ ಡಿಕೆ ಶಿವಕುಮಾರ್ ಶಾಕಿಂಗ್ ಉತ್ತರ ನೀಡಿದ್ದಾರೆ.
ನಿನ್ನೆ ಮೈಸೂರಿನಲ್ಲಿ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಐದು ವರ್ಷದವರೆಗೂ ತಮ್ಮ ತಂದೆಯೇ ಸಿಎಂ ಆಗಿ ಮುಂದುವರಿಯುತ್ತಾರೆ. ಹೈಕಮಾಂಡ್ ಯಾರ ಒತ್ತಡಕ್ಕೂ ಮಣಿದಿಲ್ಲ. ಬದಲಾವಣೆ ಬಗ್ಗೆ ಹೇಳಿಲ್ಲ ಎಂದು ಹೇಳಿಕೆ ನೀಡಿದ್ದರು.
ಇದರ ಬೆನ್ನಲ್ಲೇ ಮತ್ತೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ದೊಡ್ಡ ಸುದ್ದಿಯಾಗುತ್ತಿದೆ. ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಬಣದ ನಾಯಕರು ಬಹಿರಂಗವಾಗಿಯೇ ಮತ್ತೆ ಹೇಳಿಕೆ ನೀಡಲು ಮುಂದಾಗಿದ್ದಾರೆ. ಸ್ವತಃ ಡಿಕೆ ಶಿವಕುಮಾರ್ ಅವರೇ ನಿನ್ನೆ ಯತೀಂದ್ರನೇ ನಮ್ಮ ಹೈಕಮಾಂಡ್. ಅವರು ಏನು ಹೇಳ್ತಾರೋ ಕೇಳೋಣ ಎಂದು ವ್ಯಂಗ್ಯ ಮಾಡಿದ್ದರು.
ಇದೀಗ ಬಜೆಟ್ ಬಳಿಕ ಸಿಎಂ ಆಗ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ಸ್ಪಷ್ಟವಾಗಿ ಯಾವುದೇ ಉತ್ತರ ನೀಡಿಲ್ಲ. ಹಾಗಂತ ನಿರಾಕರಿಸಲೂ ಇಲ್ಲ. ಎಲ್ಲದಕ್ಕೂ ಕಾಲವೇ ಉತ್ತರ ನೀಡುತ್ತದೆ. ಕಾದು ನೋಡೋಣ ಎಂದಿದ್ದಾರೆ.