ನಾನು ಆರ್ ಎಸ್ಎಸ್ ಬಗ್ಗೆ, ಕಮ್ಯುನಿಸ್ಟ್ ಬಗ್ಗೆನೂ ಸ್ಟಡಿ ಮಾಡ್ತೀನಿ: ಡಿಕೆ ಶಿವಕುಮಾರ್

Krishnaveni K
ಶುಕ್ರವಾರ, 22 ಆಗಸ್ಟ್ 2025 (11:38 IST)
ಬೆಂಗಳೂರು: ನಿನ್ನೆ ಸದನದಲ್ಲಿ ಆರ್ ಎಸ್ಎಸ್ ಧ್ಯೇಯ ಗೀತೆ ಹಾಡಿರುವ ಬಗ್ಗೆ ಇಂದು ಮಾಧ್ಯಮಗಳ ಮುಂದೆ ಡಿಸಿಎಂ ಡಿಕೆ ಶಿವಕುಮಾರ್ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ಸದನದಲ್ಲಿ ಆರ್ ಸಿಬಿ ಕಾಲ್ತುಳಿತದ ಬಗ್ಗೆ ಚರ್ಚೆಯಾಗುತ್ತಿದ್ದಾಗ ವಿಪಕ್ಷ ನಾಯಕ ಆರ್ ಅಶೋಕ್ ಕಾಲೆಳೆದಿದ್ದಕ್ಕೆ ಪ್ರತಿಯಾಗಿ ಡಿಕೆ ಶಿವಕುಮಾರ್ ಆರ್ ಎಸ್ಎಸ್ ಧ್ಯೇಯ ಗೀತೆ ನಮಸ್ತೇ ಸದಾ ವತ್ಸಲೇ ಹಾಡು ಹಾಡಿ ಎಲ್ಲರನ್ನೂ ಬೆರಗಾಗಿಸಿದ್ದರು.

ಅವರ ಹಾಡು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇಂದು ವಿಧಾನಸೌದದ ಮುಂದೆ ಪತ್ರಕರ್ತರು ಅವರಿಗೆ ಈ ಕುರಿತು ಪ್ರಶ್ನೆ ಮಾಡಿದ್ದಾರೆ. ನಿಮ್ಮ ಹಾಡು ಈಗ ಭಾರೀ ಚರ್ಚೆಯಾಗುತ್ತಿದೆ. ನಮ್ಮ ಜೊತೆಗೆ ಶಶಿ ತರೂರ್, ಡಿಕೆ ಶಿವಕುಮಾರ್ ಅಂತಹವರು ಇದ್ದಾರೆ ಎಂದು ಬಿಜೆಪಿಯವರು ಹೇಳ್ತಿದ್ದಾರೆ ಎಂದು ಕೇಳಿದ್ದಾರೆ.

ಇದಕ್ಕೆ ಉತ್ತರಿಸಿದ ಡಿಕೆ ಶಿವಕುಮಾರ್ ‘ಅಯ್ಯೋ ಮಾತಾಡ್ಲಿ ಬಿಡಪ್ಪಾ. ನಾನು ಕಮ್ಯುನಿಸ್ಟ್ ಬಗ್ಗೆ ರಿಸರ್ಚ್ ಮಾಡಿದ್ದೀನಿ, ಜನತಾ ದಳ ಬಗ್ಗೆ ರಿಸರ್ಚ್ ಮಾಡ್ತಾ ಇರ್ತೀನಿ, ಬಿಜೆಪಿ ಬಗ್ಗೆಯೂ ರಿಸರ್ಚ್ ಮಾಡ್ತಾ ಇರ್ತೀನಿ, ಆರ್ ಎಸ್ಎಸ್ ಬಗ್ಗೆಯೂ ತಿಳಿದುಕೊಂಡಿದ್ದೀನಿ. ಈಗ ಕೆಲವು ಸಂಸ್ಥೆಗಳಲ್ಲಿ ಕೆಲವು ಒಳ್ಳೆ ಗುಣಗಳಿವೆ ಅಲ್ವಾ ಅದನ್ನು ನಾವು ತಿಳಿದುಕೊಳ್ಳಬೇಕು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments