ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ ಸಂಬಂದ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್ ಅವರು , ಇದು ಪಕ್ಷ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಟ್ಟ ವಿಚಾರ ಎಂದರು.
ಇನ್ನೂ ಬಿಗ್‌ಬಾಸ್ ಮತ್ತೇ ರೀ ಓಪನ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬುಧವಾರ ರಾತ್ರಿ ಡಿಸಿಗೆ ಕರೆ ಮಾಡಿ ಜಾಲಿವುಡ್ ಸ್ಟುಡಿಯೋದವರು ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳಲು ಒಂದು ಅವಕಾಶ ಕಲ್ಪಿಸಿ ಎಂದು ಸೂಚಿಸಿದ್ದೇನೆ.
ನಮ್ಮ ಉದ್ಯಮ ಬೆಳೆಯಬೇಕು. ಇದು ಹೆಚ್ಚಿನ ಮಾಲಿನ್ಯ ಉಂಟು ಮಾಡಲು ದೊಡ್ಡ ಕಾರ್ಖಾನೆ ಏನಲ್ಲ.
ಸಣ್ಣಪುಟ್ಟ ನಿಯಮ ಉಲ್ಲಂಘನೆಯಾಗಿದ್ದರೆ ಸರಿಪಡಿಸಿಕೊಳ್ಳಿ. ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಾವಳಿಯನ್ನು ಪಾಲನೆ ಮಾಡಿ ಎಂದು ಸ್ಟುಡಿಯೋದವರಿಗೂ ಹೇಳಿ ಎಚ್ಚರಿಸಲಾಗಿದೆ ಎಂದರು.