ಶ್ರೀರಂಗಪಟ್ಟಣ: ಡಿಸಿಎಂ ಡಿಕೆ ಶಿವಕುಮಾರ್ ಅವರ ಬೆಂಗಾವಲು ವಾಹನ ಪಲ್ಟಿಯಾಗಿ ಅದರಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಟಿ.ಎಂ. ಹೊಸೂರು ಗೇಟ್ ಬಳಿ ಶನಿವಾರ ನಡೆದಿದೆ.
ಮೈಸೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ ಮುಗಿಸಿ ಡಿ.ಕೆ. ಶಿವಕುಮಾರ್ ಬೆಂಗಳೂರಿಗೆ ತೆರಳುತ್ತಿದ್ದಾಗ, ಹಿಂದೆ ಬರುತ್ತಿದ್ದ ಬೆಂಗಾವಲು ವಾಹನ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ.
ಘಟನೆಯಲ್ಲಿ ಬೆಂಗಾವಲು ವಾಹನದಲ್ಲಿದ್ದ ಬೆಂಗಳೂರಿನ ದಿನೇಶ್, ಮಹೇಶ್, ಜಯಲಿಂಗು ಮತ್ತು ಕಾರ್ತಿಕ್ ಎಂಬವರು ಗಾಯಗೊಂಡಿದ್ದಾರೆ. ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ
ಘಟನೆಯಲ್ಲಿ ಬೆಂಗಾವಲು ವಾಹನ ಭಾಗಶಃ ಜಖಂಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.