Publish Date: Sat, 15 Aug 2026 (11:06 IST)
Updated Date: Sat, 15 Aug 2026 (11:10 IST)
ಬೆಂಗಳೂರು: ಇಂದು ದೇಶದಾದ್ಯಂತ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನೂ ಅದ್ಧೂರಿಯಾಗಿ ಆಚರಿಸಲಾಯಿತು. ಇನ್ನೂ ಸಿಎಂ ಆಗಿ ಮೊದಲ ಬಾರಿ ಡಿಕೆ ಶಿವಕುಮಾರ್ ಅವರು ಧ್ವಜಾರೋಹಣ ನೆರವೇರಿಸಿದ್ದು ತುಂಬಾನೇ ವಿಶೇಷವಾಗಿತ್ತು. ಹೊಸ ಲುಕ್‌ನಲ್ಲಿ ಬಂದ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕೃತವಾಗಿ ಧ್ವಜಾರೋಹಣ ನೆರವೇರಿಸಿದ್ದಾರೆ.
ಇದಕ್ಕೂ ಮುನ್ನ ಅವರು ತಮ್ಮ ಸದಾಶಿವನಗರ ನಿವಾಸದಲ್ಲೂ ಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭ ಕೋರಿದ್ದರು.
ಬೆಂಗಳೂರು ಅಭಿವೃದ್ಧಿ ಸಚಿವರಾಗಿದ್ದ ಸಂದರ್ಭದಲ್ಲಿ, ಕರ್ನಾಟಕ ರಾಜ್ಯೋತ್ಸವದ (ನವೆಂಬರ್ 1) ದಿನದಂದು ಬೆಂಗಳೂರಿನ ಎಲ್ಲಾ ಖಾಸಗಿ ಕಂಪನಿಗಳು, ಶಿಕ್ಷಣ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಐಟಿ-ಬಿಟಿ ಸಂಸ್ಥೆಗಳಲ್ಲಿ ಕನ್ನಡ ಧ್ವಜಾರೋಹಣವನ್ನು ಕಡ್ಡಾಯಗೊಳಿಸಿ ಅವರು ಆದೇಶ ಹೊರಡಿಸಿದ್ದರು.
ಸ್ಥಳೀಯ ಭಾಷೆ ಮತ್ತು ಸಂಸ್ಕೃತಿಗೆ ಗೌರವ ಹಾಗೂ ಕನ್ನಡಿಗರ ಬಗ್ಗೆ ಹೆಮ್ಮೆ ಮೂಡಿಸಲು ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿತ್ತು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ