Publish Date: Fri, 09 Jul 2021 (09:10 IST)
Updated Date: Fri, 09 Jul 2021 (09:11 IST)
ಬೆಂಗಳೂರು: ಸ್ಯಾಂಡಲ್ ವುಡ್ ನಿರ್ದೇಶಕ ಎಸ್. ನಾರಾಯಣ್, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಪರಸ್ಪರ ಭೇಟಿಯಾಗಿರುವುದು ತೀವ್ರ ಕುತೂಹಲ ಕೆರಳಿಸಿದೆ.
ಡಿಕೆಶಿ ಮತ್ತು ಎಸ್. ನಾರಾಯಣ್ ಪರಸ್ಪರ ಸಮಾಲೋಚನೆ ನಡೆಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಡಿಕೆಶಿ ಸ್ಯಾಂಡಲ್ ವುಡ್ ನ ಹಲವು ಕಲಾವಿದರೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಈ ಭೇಟಿ ಯಾವ ಕಾರಣಕ್ಕೆ ನಡೆದಿತ್ತು ಎಂಬುದು ಸ್ಪಷ್ಟವಾಗಿಲ್ಲ. ಆದರೆ ಯಾವುದೋ ವಿಚಾರವಾಗಿ ಇಬ್ಬರೂ ಗಹನವಾದ ಚರ್ಚೆ ನಡೆಸಿದ್ದಾರೆ ಎಂಬುದು ತಿಳಿದುಬಂದಿದೆ.