Publish Date: Tue, 02 Jun 2026 (19:13 IST)
Updated Date: Tue, 02 Jun 2026 (19:17 IST)
ಬೆಂಗಳೂರು : ನಾಳೆ ಡಿಕೆ ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಭದ್ರತೆ ಹಿನ್ನೆಲೆ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ(ಎಂ.ಎಸ್.ಬಿಲ್ಡಿಂಗ್)ದಲ್ಲಿನ ಅಧಿಕಾರಿ-ಸಿಬ್ಬಂದಿಗಳಿಗೆ ನಾಳೆ(ಜೂ.3) ಮಧ್ಯಾಹ್ನ ಅರ್ಧದಿನ ರಜೆ ನೀಡಲಾಗಿದೆ.
ಮಂಗಳವಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಆರ್.ಯದುಕುಮಾರ್ ಆದೇಶ ಹೊರಡಿಸಿದ್ದು, ರಾಜ್ಯದ ನಿಯೋಜಿತ ಸಿಎಂ ಪ್ರಮಾಣ ವಚನ ನಾಳೆ ಸಂಜೆ 4:05ರ ಸುಮಾರಿಗೆ ಲೋಕಭವನದಲ್ಲಿ ನಿಗದಿಯಾಗಿದೆ.
ಲೋಕಭವನ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಜನಸಂದಣಿ ಹಾಗೂ ವಾಹನ ಸಂಚಾರ ದಟ್ಟಣೆ ಉಂಟಾಗುವ ಸಂಭವವಿದೆ. ಭದ್ರತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ಮೇಲ್ಕಂಡ ಸಿಬ್ಬಂದಿಗೆ ಅರ್ಧದಿನ ರಜೆ ನೀಡಲಾಗಿದೆ ಎಂದು ಹೇಳಿದ್ದಾರೆ.
ನೂತನ ಸಿಎಂ ಪ್ರಮಾಣ ವಚನ ಸಮಾರಂಭದಲ್ಲಿ ಲೋಕಭವನಕ್ಕೆ ಸುಮಾರು 800 ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಕಾಂಗ್ರೆಸ್ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರು ಭಾಗವಹಿಸುವ ಸಾಧ್ಯತೆಯಿದೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ