Daily Horoscope
✕

ನಾಳೆ ಡಿಕೆ ಶಿವಕುಮಾರ್ ಪ್ರಮಾಣವಚನ: ಶಕ್ತಿಕೇಂದ್ರದ ಸಿಬ್ಬಂದಿಗೆ ಅರ್ಧದಿನ ರಜೆ

ಸಂಪ್ರಿಯ
ಮಂಗಳವಾರ, 2 ಜೂನ್ 2026 (19:13 IST)
Photo Courtesy X
ಬೆಂಗಳೂರು : ನಾಳೆ ಡಿಕೆ ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಭದ್ರತೆ ಹಿನ್ನೆಲೆ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ(ಎಂ.ಎಸ್.ಬಿಲ್ಡಿಂಗ್)ದಲ್ಲಿನ ಅಧಿಕಾರಿ-ಸಿಬ್ಬಂದಿಗಳಿಗೆ ನಾಳೆ(ಜೂ.3) ಮಧ್ಯಾಹ್ನ ಅರ್ಧದಿನ ರಜೆ ನೀಡಲಾಗಿದೆ.

ಮಂಗಳವಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಆರ್.ಯದುಕುಮಾರ್ ಆದೇಶ ಹೊರಡಿಸಿದ್ದು, ರಾಜ್ಯದ ನಿಯೋಜಿತ ಸಿಎಂ ಪ್ರಮಾಣ ವಚನ ನಾಳೆ ಸಂಜೆ 4:05ರ ಸುಮಾರಿಗೆ ಲೋಕಭವನದಲ್ಲಿ ನಿಗದಿಯಾಗಿದೆ.

 ಲೋಕಭವನ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಜನಸಂದಣಿ ಹಾಗೂ ವಾಹನ ಸಂಚಾರ ದಟ್ಟಣೆ ಉಂಟಾಗುವ ಸಂಭವವಿದೆ. ಭದ್ರತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ಮೇಲ್ಕಂಡ ಸಿಬ್ಬಂದಿಗೆ ಅರ್ಧದಿನ ರಜೆ ನೀಡಲಾಗಿದೆ ಎಂದು ಹೇಳಿದ್ದಾರೆ.

ನೂತನ ಸಿಎಂ ಪ್ರಮಾಣ ವಚನ ಸಮಾರಂಭದಲ್ಲಿ ಲೋಕಭವನಕ್ಕೆ ಸುಮಾರು 800 ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಕಾಂಗ್ರೆಸ್ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರು ಭಾಗವಹಿಸುವ ಸಾಧ್ಯತೆಯಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಬದುಕೇ ನಮಗೆ ಪಾಠ ಶಾಲೆ: ಬಿಕೆ ಹರಿಪ್ರಸಾದ್

Gold Price: ಆಭರಣ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ: ಇಂದು ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರಿ ಇಳಿಕೆ

ಸೋನಿಯಾ ಗಾಂಧಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಸಿದ್ದರಾಮಯ್ಯಗೆ ಹಿಂಬದಿ ಸೀಟು ಯಾಕೆ

ಮನೆ ಕಟ್ಟುವಾಗ ಸಿಕ್ತು 13 ಅಡಿ ಉದ್ದದ ಬೃಹತ್ ಕಾಳಿಂಗ: Video

ಮುಂದಿನ ಸುದ್ದಿ
Show comments