Daily Horoscope

Select Your Language

Notifications

webdunia
webdunia
webdunia
webdunia

ಸಚಿವ ಸಂಪುಟ ವಿಸ್ತರಣೆಯ ಕಸರತ್ತಿನ ಬೆನ್ನಲ್ಲೇ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಭೇಟಿ

CM DK Shivkumar
Photo Courtesy X
ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಕೆಲಹೊತ್ತು ಮಾತುಕತೆ ನಡೆಸಿದರು. ಕಾವೇರಿ ನಿವಾಸದಲ್ಲಿ ಭೇಟಿಯಾದ ಡಿಕೆ ಶಿವಕುಮಾರ್ ಅವರು ಮಹತ್ವ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿಯಿದೆ.

ಭೇಟಿ ಸಂಬಂದ ಇಬ್ಬರು ನಾಯಕರು ತಮ್ಮ ಎಕಸ್‌ ಖಾತೆಯಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ. 

ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಇಂದು ನನ್ನನ್ನು ಭೇಟಿಯಾಗಿ, ಹಲವು ಮಹತ್ವದ
ವಿಚಾರಗಳ ಕುರಿತು ಮಾತುಕತೆ ನಡೆಸಿದರು ಎಂದು ಸಿದ್ದರಾಮಯ್ಯ ಅವರು ಬರೆದುಕೊಂಡಿದ್ದಾರೆ. 

ಡಿಕೆ ಶಿವಕುಮಾರ್ ಅವರು ಕೂಡಾ ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾನಮಯ್ಯ ಭೇಟಿ ವೇಳಿನ ಫೋಟೋ ಹಂಚಿಕೊಂಡು, ನಿಕಟಪೂರ್ವ ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾದ ಶ್ರೀ ಸಿದ್ದರಾಮಯ್ಯ ಅವರನ್ನು ಇಂದು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ, ವಿವಿಧ ವಿಷಯಗಳ ಕುರಿತು ಸಮಾಲೋಚಿಸಲಾಯಿತು ಎಂದು ಬರೆದುಕೊಂಡಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ, ತನಿಖೆ ಸಂಬಂಧ ತೆರಳುತ್ತಿದ್ದ ಕಾರು ಚಾರ್ಮಾಡಿಯಲ್ಲಿ ಪಲ್ಟಿ