Webdunia - Bharat's app for daily news and videos

Install App

ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ: ಡಿಸಿಎಂ ಡಿ.ಕೆ. ಶಿವಕುಮಾರ್

Krishnaveni K
ಶುಕ್ರವಾರ, 11 ಜುಲೈ 2025 (16:11 IST)
ಬೆಂಗಳೂರು: ನೀರಾವರಿ ಯೋಜನೆಗಳ ವಿಚಾರವಾಗಿ ದೆಹಲಿ ಪ್ರವಾಸ ಬಹುತೇಕ ಫಲಪ್ರದವಾಗಿದ್ದು, ಎತ್ತಿನಹೊಳೆ ಯೋಜನೆ ಸಂಬಂಧ ನಮ್ಮ ಮನವಿಯನ್ನು ಪುರಸ್ಕರಿಸುವುದಾಗಿ ಹೇಳಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
 
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.
 
ದೆಹಲಿ ಪ್ರವಾಸದ ಬಗ್ಗೆ ಮಾಧ್ಯಮಗಳು ಕೇಳಿದಾಗ, “ದೆಹಲಿ ಪ್ರವಾಸದಲ್ಲಿ ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್ ಪಾಟೀಲ್, ಭೂಪೇಂದರ್ ಯಾದವ್, ಸೋಮಣ್ಣ ಹಾಗೂ ಪ್ರಹ್ಲಾದ್ ಜೋಷಿ ಅವರನ್ನು ಭೇಟಿ ಮಾಡಿದ್ದೆ. ಈ ಭೇಟಿ ವೇಳೆ ಕೃಷ್ಣಾ ನ್ಯಾಯಾಧಿಕರಣದ ತೀರ್ಪಿನ ಸಂಬಂಧ ಅಧಿಸೂಚನೆ ಹೊರಡಿಸುವುದು, ಮೆಕೆದಾಟು ಯೋಜನೆ ಅಪ್ರೈಸಲ್ ವರದಿ ಬಗ್ಗೆ ಚರ್ಚಿಸಲಾಗಿದೆ. ಕೃಷ್ಣಾ ನದಿ ವಿಚಾರವಾಗಿ ನಾವು ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿದ್ದೇವೆ ಎಂದು ಮನದಟ್ಟು ಮಾಡಿದ್ದೇವೆ. ಹೀಗಾಗಿ ಮುಂದೂಡಲಾಗಿರುವ ಸಭೆಯನ್ನು ಶೀಘ್ರದಲ್ಲೇ ಕರೆಯುವುದಾಗಿ ತಿಳಿಸಿದ್ದಾರೆ. ಅರಣ್ಯ ಸಚಿವರ ಬಳಿ ಕಳಸಾ ಬಂಡೂರಿ ವಿಚಾರವಾಗಿ ಚರ್ಚೆ ಮಾಡಲಾಗಿದೆ. ಈ ವಿಚಾರವಾಗಿ ಪ್ರಹ್ಲಾದ್ ಜೋಷಿ ಅವರ ಜತೆಗೂ ಮಾತನಾಡಿದ್ದೇನೆ ಎರಡು ರಾಜ್ಯಗಳ ನಡುವೆ ರಾಜಿಗೆ ಸಲಹೆ ನೀಡಿದ್ದಾರೆ. ನಾವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಈ ವಿಚಾರದಲ್ಲಿ ಕೆಲವು ತಾಂತ್ರಿಕ ಅಂಶಗಳಿವೆ. ಈ ಬಗ್ಗೆ ಕಾನೂನು ತಜ್ಞರ ಜೊತೆ ಸಭೆ ಮಾಡಿದ್ದೇನೆ. ಗೋವಾ ದವರು ನಮಗೆ ಶೋಕಾಸ್ ನೋಟೀಸ್ ನೀಡಿರುವುದು ಸರಿಯಲ್ಲ ಎಂದು ಹೇಳಿದ್ದು, ಕಾನೂನು ತಜ್ಞರ ಜೊತೆ ಚರ್ಚೆ ಮಾಡಲಾಗಿದೆ” ಎಂದರು. 
 
“ಜೊತೆಗೆ ಹೊಸದಾಗಿ 6 ಯೋಜನೆಗಳಿಗೆ ಮನವಿ ಸಲ್ಲಿಸಿದ್ದೇವೆ. ಭದ್ರಾ ಮೇಲ್ದಂಡೆ ಯೋಜನೆ ವಿಚಾರವಾಗಿ ಕೇಂದ್ರ ಘೋಷಿಸಿದ್ದ ಅನುದಾನದ ಬಗ್ಗೆಯೂ ಮನವಿ ಸಲ್ಲಿಸಿದ್ದೇನೆ. ಸಂಸತ್ ಅಧಿವೇಶನ ಸಂದರ್ಭದಲ್ಲಿ ಮತ್ತೊಮ್ಮೆ ದೆಹಲಿಗೆ ಹೋಗಿ, ರಾಜ್ಯದ ಸಂಸದರ ಜೊತೆ ಚರ್ಚೆ ನಡೆಸಿ ಒಟ್ಟಾಗಿ ಒತ್ತಾಯ ಹೇರಲು ಮನವಿ ಮಾಡಲಾಗುವುದು. ನಾನು, ಮುಖ್ಯಮಂತ್ರಿಗಳು, ಬೃಹತ್ ಕೈಗಾರಿಕಾ ಸಚಿವರು ಸೇರಿ ಕೇಂದ್ರ ರಕ್ಷಣಾ ಸಚಿವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಡಿಫೆನ್ಸ್ ಕಾರಿಡಾರ್ ಹಾಗೂ ಬೆಂಗಳೂರಿನಲ್ಲಿ ವಿವಿಧ ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಬಿಟ್ಟುಕೊಡಬೇಕು ಎಂದು ಮನವಿ ಮಾಡಿದ್ದೇವೆ” ಎಂದು ತಿಳಿಸಿದರು.
 
ಎತ್ತಿನಹೊಳೆ ಯೋಜನೆ ಸಂಬಂಧ ಲಕ್ಕೇನಹಳ್ಳಿಯಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ವಿರೋಧ ವ್ಯಕ್ತವಾಗಿರುವ ಬಗ್ಗೆ ಕೇಳಿದಾಗ, “ನೀವು ರಸ್ತೆ, ಅಣೆಕಟ್ಟು ಸೇರಿದಂತೆ ಯಾವುದೇ ಯೋಜನೆ ಮಾಡಬೇಕಾದರೂ ವಿರೋಧ ವ್ಯಕ್ತವಾಗುತ್ತದೆ. ಕುಡಿಯುವ ನೀರು ಪೂರೈಸಲೇಬೇಕು. ಈ ನೀರನ್ನು ಎಲ್ಲಾದರೂ ಸಂಗ್ರಹ ಮಾಡಿಕೊಳ್ಳಬೇಕು. ಲಕ್ಕೇನಹಳ್ಳಿ ಮಾತ್ರವಷ್ಟೇ ಅಲ್ಲ, ಕೊರಟಗೆರೆ ಭಾಗದಲ್ಲಿ ಕೆಲವು ಪ್ರದೇಶ ಬಳಸಿಕೊಳ್ಳಬೇಕು ಎಂದು ಆಲೋಚಿಸಿದ್ದೆವು. ನೀರು ಹೇಗೆ ಹರಿಯುತ್ತದೆ ಹೇಳಲು ಸಾಧ್ಯವಿಲ್ಲ. ಈ ವಿಚಾರವಾಗಿ ಪರಮೇಶ್ವರ್ ಅವರ ಜತೆ ಚರ್ಚಿಸಿ, ಮುಂದಿನ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗುವುದು” ಎಂದು ತಿಳಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments