Select Your Language

Notifications

webdunia
webdunia
webdunia
webdunia

ಹಾಲಿನ ದರ ಏರಿಕೆ ಬಗ್ಗೆ ಕುಮಾರಸ್ವಾಮಿ ಏನಾದ್ರೂ ಹೇಳ್ಕೊಳ್ಳಲಿ: ಡಿಕೆ ಶಿವಕುಮಾರ್

DK Shivakumar

Krishnaveni K

ಬೆಂಗಳೂರು , ಶುಕ್ರವಾರ, 28 ಮಾರ್ಚ್ 2025 (14:58 IST)
ಬೆಂಗಳೂರು: ನಂದಿನಿ ಹಾಲು ದರ ಏರಿಕೆ ಬಗ್ಗೆ ಟೀಕೆ ಮಾಡಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿರುವ ಡಿಕೆ ಶಿವಕುಮಾರ್ ಏನಾದ್ರೂ ಹೇಳ್ಕೊಳ್ಳಲಿ ಎಂದಿದ್ದಾರೆ.

ನವದೆಹಲಿಯಲ್ಲಿ ಶುಕ್ರವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದ ಎದಿರು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮದವರ ಜತೆ ಮಾತನಾಡಿದರು. ಹಾಲಿನ ದರ ಏರಿಕೆ ಹೆಚ್ಚಳ ವಿರೋಧಿಸಿ, ಇದು ಈಸ್ಟ್ ಇಂಡಿಯಾ ಸರ್ಕಾರ ಎಂಬ ಕುಮಾರಸ್ವಾಮಿ ಟೀಕೆ ಬಗ್ಗೆ ಕೇಳಿದಾಗ, "ಕುಮಾರಸ್ವಾಮಿ ಅವರು ಏನಾದರೂ ಟೀಕೆ ಮಾಡಲಿ. ರೈತರು ಬದುಕಬೇಕಲ್ಲವೇ? ಅವರಿಗೆ ಕಾಳಜಿ ಇದ್ದರೆ, ಹಸುಗಳ ಮೇವಿನ ಬೆಲೆ ಕಡಿಮೆ ಮಾಡಿಸಲಿ. ಜಿಎಸ್ ಟಿ, ಇಂಧನ ತೈಲ ಬೆಲೆ ಕಡಿಮೆ ಮಾಡಿಸಲಿ" ಎಂದು ತಿರುಗೇಟು ನೀಡಿದರು.

ದರ ಹೆಚ್ಚಳದ ಹಣ ರೈತರಿಗೆ ಹೋಗುವುದಿಲ್ಲ, ಸರ್ಕಾರಕ್ಕೆ ಹೋಗಲಿದೆ ಎಂಬ ಕುಮಾರಸ್ವಾಮಿ ಟೀಕಿ ಬಗ್ಗೆ ಕೇಳಿದಾಗ, "ಸರ್ಕಾರಕ್ಕೆ ಹೇಗೆ ಹೋಗುತ್ತದೆ. ಹಾಗಿದ್ದರೆ ಕುಮಾರಸ್ವಾಮಿ ಅವರಿಗೆ ಹಾಲು ಒಕ್ಕೂಟದ ವ್ಯವಸ್ಥೆ ಬಗ್ಗೆ ಗೊತ್ತೇ ಇಲ್ಲ. ಈ ಬಗ್ಗೆ ಕುಮಾರಸ್ವಾಮಿ ಅವರು ತಮ್ಮ ಸಹೋದರನ ಬಳಿ ಮಾಹಿತಿ ಪಡೆಯಲಿ" ಎಂದು ಹರಿಹಾಯ್ದರು.

ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಸಂಬಂಧಿಸಿದಂತೆ ಪ್ರಿಯಾಂಕಾ ಗಾಂಧಿ ಅವರು ಪತ್ರ ಬರೆದಿರುವ ಬಗ್ಗೆ ಕೇಳಿದಾಗ, "ನಾವು ಈ ಪತ್ರ ನೋಡುತ್ತೇವೆ, ಪರಿಶೀಲನೆ ಮಾಡಿ, ಚರ್ಚಿಸುತ್ತೇವೆ. ಆನಂತರ ತೀರ್ಮಾನ ಮಾಡುತ್ತೇವೆ" ಎಂದು ತಿಳಿಸಿದರು.

ನನ್ನ ಹತ್ಯೆಗೆ ಸುಪಾರಿ ನೀಡಲಾಗಿದೆ ಎಂಬ ರಾಜೇಂದ್ರ ಅವರ ದೂರಿನ ಬಗ್ಗೆ ಕೇಳಿದಾಗ, "ಈ ಬಗ್ಗೆ ನನಗೆ ಗೊತ್ತಿಲ್ಲ" ಎಂದರು.

ಬಿಜೆಪಿಯಲ್ಲಿನ ಬೆಳವಣಿಗೆ ಬಗ್ಗೆ ಕೇಳಿದಾಗ, "ಅವರ ಪಕ್ಷದವರು ಯಾರು ಏನಾದರೂ ಮಾಡಿಕೊಳ್ಳಲಿ. ಅದರ ಬಗ್ಗೆ ಮಾತನಾಡಿ ನಾನು ಏಕೆ ಅವರ ಪಕ್ಷದ ವಕ್ತಾರನಾಗಲಿ" ಎಂದು ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ನಂದಿನಿ ಹಾಲಿನ ದರ ಜನರಿಗೆ ಏನೂ ಹೊರೆಯಾಗಲ್ಲ ಬಿಡ್ರೀ..: ಶಾಸಕ ರಾಜು ಕಾಗೆ