Webdunia - Bharat's app for daily news and videos

Install App

ನನ್ನ ಬಗ್ಗೆ ಯಾವ ಗುರೂಜಿ, ಸ್ವಾಮೀಜಿ ಎಲ್ಲಾ ಭವಿಷ್ಯ ಹೇಳೋದು ಬೇಕಿಲ್ಲ: ಡಿಕೆ ಶಿವಕುಮಾರ್

Krishnaveni K
ಶನಿವಾರ, 11 ಜನವರಿ 2025 (11:27 IST)
ಬೆಂಗಳೂರು: ನನ್ನ ಬಗ್ಗೆ ಯಾವ ಗುರೂಜಿ, ಸ್ವಾಮೀಜಿ ಎಲ್ಲಾ ಭವಿಷ್ಯ ಹೇಳೋದು ಬೇಕಿಲ್ಲ ಎಂದು ಡಿಕೆ ಶಿವಕುಮಾರ್ ಖಡಕ್ ಆಗಿ ಹೇಳಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ವಿನಯ್ ಗುರೂಜಿ ಡಿಕೆ ಶಿವಕುಮಾರ್ ಮುಂದೆ ಸಿಎಂ ಆಗಿಯೇ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಈ ಬಗ್ಗೆ ಮಾಧ್ಯಮಗಳು ಡಿಕೆಶಿಯನ್ನು ಪ್ರಶ್ನಿಸಿದಾಗ ಅವರು ಈ ರೀತಿ ಉತ್ತರ ಕೊಟ್ಟಿದ್ದಾರೆ.

ಇದೇ ಅವಧಿಯಲ್ಲಿ ಡಿಕೆಶಿ ಸಿಎಂ ಆಗುತ್ತಾರೆ ಎಂದು ವಿನಯ್ ಗುರೂಜಿ ಭವಿಷ್ಯ ನುಡಿದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ ‘ನಾನು ಎಲ್ಲಾ ಸ್ವಾಮೀಜಿ, ಗುರೂಜಿಗಳಿಗೆ ವಿನಂತಿ ಮಾಡ್ತೀನಿ, ನಮ್ಮ ಸರ್ಕಾರದ ವಿಚಾರದಲ್ಲಿ ತಮ್ಮ ಯಾವ ಹೇಳಿಕೆಯೂ ಬೇಡ. ನಮ್ಮ ಸರ್ಕಾರ ಸುಭದ್ರವಾಗಿ ನಡೆಯುತ್ತಿದೆ.  ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಕೆಲಸ ಮಾಡುತ್ತಿದ್ದಾರೆ.  ಅವರ ನೇತೃತ್ವದಲ್ಲಿ ನಾವೆಲ್ಲರೂ ಕೆಲಸ ಮಾಡುತ್ತಿದ್ದೇವೆ. ನಮ್ಮ ಬಗ್ಗೆ ಯಾರೂ ಭವಿಷ್ಯ ನುಡಿಯುವುದು ಬೇಕಿಲ್ಲ’ ಎಂದು ಡಿಕೆಶಿ ಹೇಳಿದ್ದಾರೆ.

ಇನ್ನು ಅಧಿಕಾರ ಹಂಚಿಕೆ ಬಗ್ಗೆ ಕೇಳಿದಾಗ, ಯಾವ ಪವರ್ ಶೇರಿಂಗ್ ಇಲ್ಲ. 5 ವರ್ಷ ಕಾಂಗ್ರೆಸ್ ಸರ್ಕಾರವೇ ನಡೆಯುತ್ತದೆ ಎಂದಿದ್ದಾರೆ. ಆದರೆ ಸಿಎಂ ಬದಲಾವಣೆ ಬಗ್ಗೆ ನೇರವಾಗಿ ಏನೂ ಹೇಳಲು ಹೋಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

CET ಬರೆಯಲು ಜನಿವಾರ ತೆಗೆಸಿದ ಪ್ರಕರಣ: ರಾಜ್ಯ ಸರ್ಕಾರದ ನಡೆ ವಿರುದ್ಧ ದೂರು ಕೊಟ್ಟ ಅಶೋಕ್‌

Pahagram Terror Attack: ನಮಾಜ್‌ಗೂ ಮುನ್ನಾ ಓವೈಸಿ ಕಪ್ಪು ಪಟ್ಟಿ ಧರಿಸಿದ್ದೇಕೆ

Pahargram, ಹಿಂದೂ ಮುಸ್ಲಿಂ ಮಧ್ಯೆ ಬೆಂಕಿ ಹಚ್ಚುವ ಮುನ್ನ ಬಿಜೆಪಿ ಇದಕ್ಕೆ ಉತ್ತರಿಸಲಿ: ಪ್ರಿಯಾಂಕ್ ಖರ್ಗೆ ಸವಾಲು

ಪಾಕಿಸ್ತಾನಿಯರನ್ನು ಗುರುತಿಸಿ, ಅವರ ದೇಶಕ್ಕೇ ಕಳುಹಿಸಿ: ಎಲ್ಲಾ ಮುಖ್ಯಮಂತ್ರಿಗಳಿಗೆ ಅಮಿತ್ ಶಾ ಆದೇಶ

ಭಾರತೀಯ ಸೇನೆಯನ್ನು ಪ್ರಶ್ನಿಸುವವರ ಈ Videoವನ್ನು ನೋಡಲೇ ಬೇಕು, ಮೆಚ್ಚಲೇ ಬೇಕು

ಮುಂದಿನ ಸುದ್ದಿ
Show comments