Select Your Language

Notifications

webdunia
webdunia
webdunia
webdunia

ಅಧಿಕಾರ ಹಂಚಿಕೆ ಬಗ್ಗೆ ಬೆಂಬಲಿಗರ ಜೊತೆ ಸಭೆ: ಡಿಕೆ ಶಿವಕುಮಾರ್ ದಿಡೀರ್ ಯು ಟರ್ನ್

DK Shivakumar
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಇನ್ನೂ ಬಿಸಿಯಾಗಿಯೇ ಇದೆ. ಇದರ ನಡುವೆ ಇಂದು ಡಿಕೆಶಿ ಬೆಂಬಲಿಗರ ಸಭೆ ನಡೆಸಲು ತೀರ್ಮಾನಿಸಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇದು ರದ್ದಾಗಿದೆ.

ಡಿಕೆ ಶಿವಕುಮಾರ್ ಮೊನ್ನೆಯಷ್ಟೇ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರ ಜೊತೆ ಮಾತುಕತೆ ನಡೆಸಿ ಬಂದಿದ್ದಾರೆ. ಈ ವೇಳೆ ಅಧಿಕಾರ ಹಂಚಿಕೆ ಕುರಿತು ಏನು ಚರ್ಚೆಯಾಗಿದೆ ಎಂಬ ಬಗ್ಗೆ ಗುಟ್ಟು ಬಿಟ್ಟುಕೊಟ್ಟಿಲ್ಲ. ಏಪ್ರಿಲ್ ನಲ್ಲಿ ಗುಡ್ ನ್ಯೂಸ್ ನಿರೀಕ್ಷಿಸೋಣ ಎಂದಿದ್ದರು.

ಇದರ ನಡುವೆ ಇಂದು ಡಿಕೆಶಿ ಬಣದಲ್ಲಿ ಗುರುತಿಸಿಕೊಂಡಿದ್ದ ಮಾಗಡಿ ಬಾಲಕೃಷ್ಣ ಸೇರಿದಂತೆ ಪ್ರಮುಖ ಸಚಿವರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಲು ಪ್ಲ್ಯಾನ್ ಮಾಡಿದ್ದರು. ಆದರೆ ಇದಕ್ಕೆ ಸ್ವತಃ ಡಿಕೆಶಿ ಬ್ರೇಕ್ ಹಾಕಿದ್ದಾರೆ.

ನಾಳೆಯಿಂದ ಅಧಿವೇಶನ ಆರಂಭವಾಗುತ್ತಿದೆ. ಹೀಗಾಗಿ ಈ ಸಂದರ್ಭದಲ್ಲಿ ಸಭೆ ಮಾಡಿಕೊಂಡು ಕೂತರೆ ವಿಪಕ್ಷಗಳಿಗೆ ಸದನದಲ್ಲಿ ಇದೇ ಅಸ್ತ್ರವಾಗಲಿದೆ. ಹೀಗಾಗಿ ಯಾವುದೇ ಗೊಂದಲಗಳು ಉಂಟು ಮಾಡಬೇಡಿ. ಸದ್ಯಕ್ಕೆ ಸಭೆ ಬೇಡ ಎಂದು ಬೆಂಬಲಿಗರ ಡಿಕೆ ಶಿವಕುಮಾರ್ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಿಜಿಪಿ ರಾಮಚಂದ್ರ ರಾವ್ ವಿಡಿಯೋ ನಕಲಿ ಎಂದು ಸಾಬೀತಾದ್ರೆ ಏನಾಗಲಿದೆ