Webdunia - Bharat's app for daily news and videos

Install App

ಸುವರ್ಣಸೌಧ ಗಾಂಧಿ ಪ್ರತಿಮೆ ರಾಹುಲ್ ಗಾಂಧಿಯಿಂದ ಉದ್ಘಾಟನೆ: ಡಿಕೆ ಶಿವಕುಮಾರ್

Krishnaveni K
ಶನಿವಾರ, 18 ಜನವರಿ 2025 (13:28 IST)
ಬೆಳಗಾವಿ: ಸುವರ್ಣಸೌಧ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಎಲ್ಲಾ ಪಕ್ಷದ ಶಾಸಕರ ಜತೆಗೆ ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ ನೀಡಲಾಗುವುದು. ಇದರ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
 
ಬೆಳಗಾವಿಯ ಸುವರ್ಣಸೌಧ ಗಾಂಧಿ ಪ್ರತಿಮೆ ಬಳಿ ಕಾರ್ಯಕ್ರಮ ನಡೆಯುವ ಸ್ಥಳ ಪರಿಶೀಲನೆ ನಡೆಸಿದ ಶಿವಕುಮಾರ್ ಅವರು ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
 
"ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಘನ ಉಪಸ್ಥಿತಿಯಲ್ಲಿ ಎಐಸಿಸಿ ಅಧ್ಯಕ್ಷರು, ರಾಜ್ಯ ಸಭೆ ವಿರೋಧ ಪಕ್ಷದ ನಾಯಕರೂ ಆದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಮೆ ಅನಾವರಣ ಮಾಡಲಿದ್ದಾರೆ" ಎಂದು ತಿಳಿಸಿದರು.
 
"ಕಾರ್ಯಕ್ರಮದಲ್ಲಿ ವಿಧಾನಸಭೆ ಸ್ಪೀಕರ್ ಹಾಗೂ ಪರಿಷತ್ತಿನ ಸಭಾಪತಿಗಳು ಭಾಗವಹಿಸಲಿದ್ದಾರೆ. ಎಲ್ಲಾ ಪಕ್ಷದ ಶಾಸಕರಿಗೂ ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ಕಾರ್ಯಕ್ರಮದ ನಂತರ ನೆನಪಿಗಾಗಿ ಎಲ್ಲಾ ಶಾಸಕರ ಗುಂಪು ಫೋಟೋ ತೆಗೆಯಲಾಗುವುದು. ನಂತರ ಅತಿಥಿಗಳು ಹಾಗೂ ಆಹ್ವಾನಿತರಿಗೆ ಮುಖ್ಯಮಂತ್ರಿಗಳು ಭೋಜನಕೂಟ ಏರ್ಪಡಿಸಲಿದ್ದಾರೆ. ಶಾಸಕರ ಹೊರತಾಗಿ ಗಂಗಾಧರ ದೇಶಪಾಂಡೆ ಅವರ ಕುಟುಂಬ ಸೇರಿದಂತೆ ಪ್ರಮುಖ ಕುಟುಂಬದವರಿಗೂ ಆಹ್ವಾನ ನೀಡಲಾಗುವುದು" ಎಂದು ಮಾಹಿತಿ ನೀಡಿದರು. 
 
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ
 
ಮೂಡಾ ಪ್ರಕರಣದಲ್ಲಿ ಅಕ್ರಮ ನಡೆದಿದೆ ಎಂದು ಇಡಿ ಸಂಸ್ಥೆಯ ತನಿಖೆ ಬಗ್ಗೆ ಕೇಳಿದಾಗ, "ಒಂದು ಪ್ರಕರಣ ಎಂದರೆ ಅದರ ತನಿಖೆ ಸುದೀರ್ಘ ಪ್ರಕ್ರಿಯೆಯಾಗಿದೆ. ಇಲ್ಲಿ ಅಕ್ರಮ ನಡೆದಿದೆಯೇ ಇಲ್ಲವೇ ಎಂದು ನ್ಯಾಯಾಲಯ ವಿಚಾರಣೆ ಮಾಡಬೇಕೆ ಹೊರತು, ನೀವು ನಾನು ವಿಚಾರಣೆ ಮಾಡುವಂತಹದಲ್ಲ. ನಾನು ಇಡಿ ತನಿಖೆ ನೋಡಿದ್ದೇನೆ. ಈ ಪ್ರಕರಣದ ಬಗ್ಗೆ ನಾನು ಹೆಚ್ಚಿಗೆ ಏನು ಹೇಳುವುದಿಲ್ಲ. ಮುಖ್ಯಮಂತ್ರಿಗಳು ಹಾಗೂ ಅವರ ಕುಟುಂಬದ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ. ಮುಖ್ಯಮಂತ್ರಿಗಳಾಗಲಿ, ಅವರ ಧರ್ಮಪತ್ನಿ ಅವರಾಗಲಿ ಯಾವುದೇ ಅಕ್ರಮದಲ್ಲಿ ಭಾಗಿಯಾಗಿಲ್ಲ. ಈ ವಿಚಾರ ಬಿಟ್ಟು ರಾಜ್ಯದ ವಿಚಾರದ ಬಗ್ಗೆ ಗಮನಹರಿಸಿ" ಎಂದು ಶಿವಕುಮಾರ್ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಶಾಸಕ ಎಟಿ ರಾಮಸ್ವಾಮಿ ರಾಜೀನಾಮೆ, ಕಾರಣ ಹೀಗಿದೆ

ಬಾಂಗ್ಲಾದೇಶ: ಕಿಡ್ನ್ಯಾಪ್ ಮಾಡಿ, ಹಿರಿಯ ಹಿಂದೂ ನಾಯಕನ ಬರ್ಬರ ಹತ್ಯೆ

ಮುಂದಿನ ಸುದ್ದಿ
Show comments