ಸೋನಿಯಾ ಗಾಂಧಿ ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ್ದರು, ಇನ್ನು ನಾನ್ಯಾವ ಲೆಕ್ಕ: ಡಿಕೆ ಶಿವಕುಮಾರ್

Krishnaveni K
ಶನಿವಾರ, 1 ನವೆಂಬರ್ 2025 (11:06 IST)
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ  ಸಿಎಂ ಬದಲಾವಣೆ ಚರ್ಚೆಯಾಗುತ್ತಿರುವಾಗಲೇ ಇತ್ತ ಡಿಸಿಎಂ ಡಿಕೆ ಶಿವಕುಮಾರ್, ಸೋನಿಯಾಗಾಂಧಿಯವರು ಹಿಂದೆ ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ್ದರು. ಇನ್ನು ನಾನ್ಯಾವ ಲೆಕ್ಕ ಎಂಬ ಮಾತುಗಳನ್ನಾಡಿದ್ದಾರೆ.

ನವಂಬರ್ ನಲ್ಲಿ ಸಿಎಂ ಬದಲಾವಣೆಯಾಗಲಿದೆ ಎಂಬ ಚರ್ಚೆಗಳ ನಡುವೆ ಡಿಕೆ ಶಿವಕುಮಾರ್ ತ್ಯಾಗದ ಮಾತು ಮಹತ್ವ ಪಡೆದುಕೊಂಡಿದೆ. ಇಂದಿರಾ ಗಾಂಧಿಯವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು ಸೋನಿಯಾ ಗಾಂಧಿಯವರಿಗೆ ಪ್ರಧಾನಿಯಾಗುವ ಅವಕಾಶವಿತ್ತು. ಯುಪಿಎ ಒಕ್ಕೂಟದ ಬೆಂಬಲವೂ ಇತ್ತು. ಆದರೆ ಅವರು ಪ್ರಧಾನಿ ಹುದ್ದೆ ಮುಖ್ಯವಲ್ಲ ಎಂದರು. ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರಿಗೆ ಪ್ರಧಾನಿ ಹುದ್ದೆ ಬಿಟ್ಟುಕೊಟ್ಟರು. ಈ ದೇಶಕ್ಕೆ ಗಾಂಧಿ ಕುಟುಂಬದ ಕೊಡುಗೆ ದೊಡ್ಡದು ಎಂದಿದ್ದರು.

ಅಧಿಕಾರ ಹಂಚಿಕೆ ಚರ್ಚೆಗಳ ಬೆನ್ನಲ್ಲೇ ಡಿಕೆಶಿ ಇಂತಹದ್ದೊಂದು ಹೇಳಿಕೆ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ. ಹೈಕಮಾಂಡ್ ನಿಂದ ಈ ಬಗ್ಗೆ ಸೂಚನೆ ಬಂದಿರಬಹುದೇ ಅಥವಾ ಪರೋಕ್ಷವಾಗಿ ಈ ಅವಧಿಯಲ್ಲಿ ಸಿಎಂ ಹುದ್ದೆಯ ಕನಸು ಕೈ ಬಿಟ್ಟಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments