ಜೆಡಿಎಸ್ – ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಯಾವುದೇ ರೀತಿಯಲ್ಲಿಯೂ ಗೊಂದಲ, ಅಸಮಧಾನ ಇಲ್ಲ. ಹೀಗಂತ ಸಚಿವ ಹೇಳಿದ್ದಾರೆ.
ಕಾಂಗ್ರೆಸ್ – ಜೆಡಿಎಸ್ ಪಕ್ಷಗಳಲ್ಲಿ ಬಿರುಕು ದಿನೇ ದಿನೇ ದೊಡ್ಡದಾಗುತ್ತಿದೆ ಎಂಬ ವಿಚಾರವನ್ನು ತಳ್ಳಿಹಾಕಿದ್ದಾರೆ ಸಚಿವ ಡಿ.ಕೆ.ಶಿವಕುಮಾರ್.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹೆಚ್.ಡಿ.ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ರು.
ಹೆಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿಯಾಗಿದ್ದು, ನೀವೇ ಸಿಎಂ ಆಗಿ ಮುಂದುವರೆಯಬೇಕೆಂದು ಮನವಿ ಮಾಡಿದ್ದೇವೆ ಎಂದು ಹೇಳಿದ್ರು.
ರಾಜ್ಯ ಸರಕಾರ ಸುಭದ್ರವಾಗಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ರು.