Select Your Language

Notifications

webdunia
webdunia
webdunia
webdunia

ನಾವು ಅಡ್ಡದಾರಿ ಹಿಡಿಯಲ್ಲ, ಗಾಂಧೀಜಿಯಂತೆ ಪ್ರತಿಭಟನೆ ಮಾಡ್ತೀವಿ: ಡಿಕೆ ಶಿವಕುಮಾರ್

DK Shivakumar-Siddaramaiah

Krishnaveni K

ಬೆಂಗಳೂರು , ಸೋಮವಾರ, 19 ಆಗಸ್ಟ್ 2024 (10:13 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಮುಡಾ ಹಗರಣ ವಿಚಾರಣೆಗೆ ಅನುಮತಿ ನೀಡಿರುವುದು ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ರಾಜ್ಯ ಕಾಂಗ್ರೆಸ್ ನಾಯಕರು ರಾಜ್ಯಪಾಲರ ವಿರುದ್ಧ ಹೋರಾಟಕ್ಕೆ ಸಿದ್ಧತೆ ನಡೆಸಿದ್ದಾರೆ.

ಇಂದು ರಾಜ್ಯಾಪಾಲರ ವಿರುದ್ಧ ಜಿಲ್ಲಾವಾರು ಕೇಂದ್ರದಲ್ಲಿ ಧರಣಿ, ಮೆರವಣಿಗೆ ಮೂಲಕ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್ ನಾವು ಗಾಂಧಿ ಮಾರ್ಗದಲ್ಲಿ ಪ್ರತಿಭಟನೆ ನಡೆಸಲಿದ್ದೇವೆ ಎಂದಿದ್ದಾರೆ.

ರಾಜ್ಯಪಾಲರು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ. ಇದರ ವಿರುದ್ಧ ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸಲಿದ್ದೇವೆ. ನಾವು ಹಿಂಸೆಯ ಮಾರ್ಗ ಹಿಡಿಯಲ್ಲ. ನಾವು ಗಾಂಧಿ ಮಾರ್ಗದಲ್ಲಿ ಪ್ರತಿಭಟನೆ ನಡೆಸಲಿದ್ದೇವೆ. ಪ್ರತೀ ಜಿಲ್ಲಾವಾರು ಕೇಂದ್ರಗಳಲ್ಲಿ ಶಾಂತಿಯುತವಾಗಿ ಪ್ರತಿಭಟನೆ, ಮೆರವಣಿಗೆ ಹಮ್ಮಿಕೊಂಡಿದ್ದೇವೆ ಎಂದು ಡಿಕೆಶಿ ಹೇಳಿದ್ದಾರೆ.

ಇನ್ನು, ಮುಡಾ ಹಗರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯ ಬೆನ್ನಿಗೆ ಕಾಂಗ್ರೆಸ್ ಶಾಸಕರು, ಸಚಿವರು ನಿಂತಿದ್ದಾರೆ. ಇದೊಂದು ಷಡ್ಯಂತ್ರ ಎಂದು ಗವರ್ನರ್ ವಿರುದ್ಧವೇ ಒಗ್ಗಟ್ಟಾಗಿ ಹೋರಾಡಲು ತೀರ್ಮಾನಿಸಿದ್ದಾರೆ. ಇದಲ್ಲದೆ, ಇಂಡಿಯಾ ಒಕ್ಕೂಟದ ಬೆಂಬಲ ಪಡೆದು ರಾಷ್ಟ್ರಮಟ್ಟದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಯಾವ ಬ್ಯಾಂಕ್ ನಲ್ಲಿ ಎಫ್ ಡಿ ಖಾತೆಗಳಿಗೆ ಎಷ್ಟು ಬಡ್ಡಿ ದರ, ಎಲ್ಲಿ ಲಾಭ ಸಿಗುತ್ತದೆ ಇಲ್ಲಿದೆ ಮಾಹಿತಿ