ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

Krishnaveni K
ಶುಕ್ರವಾರ, 15 ಆಗಸ್ಟ್ 2025 (11:24 IST)
ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ ನಡೆಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.
 
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಕೇಳಿದಾಗ, ಇದು ಧರ್ಮಸ್ಥಳದ ಪರ ಅಥವಾ ವಿರುದ್ಧದ ವಿಚಾರವಲ್ಲ. ಎಲ್ಲಾ ಪ್ರಕ್ರಿಯೆ ನ್ಯಾಯಬದ್ಧವಾಗಿ ನಡೆಯಬೇಕು. ಧರ್ಮಸ್ಥಳವನ್ನು ನಾನು ಬಹಳ ಹತ್ತಿರದಿಂದ ನೋಡಿದ್ದೇನೆ. ಅಲ್ಲಿನ ಭಕ್ತಿ, ಶ್ರದ್ಧೆ ಪ್ರಕ್ರಿಯೆಗಳ ಮೇಲೆ ನನಗೆ ನಂಬಿಕೆ, ಆತ್ಮವಿಶ್ವಾಸವಿದೆ. ಮುಂದಿನ ದಿನಗಳಲ್ಲಿ ತನಿಖೆಯಿಂದ ಅಲ್ಲಿ ನಡೆದಿರುವ ಷಡ್ಯಂತ್ರ ಹೊರಬರಲಿದೆ ಎಂಬ ವಿಶ್ವಾಸ ನನ್ನದು. ಈ ಪ್ರಕರಣದ ವಿಚಾರವಾಗಿ ನಮ್ಮ ಗೃಹ ಸಚಿವರು ಅಧಿವೇಶನದಲ್ಲಿ ಉತ್ತರ ನೀಡುವ ಮೂಲಕ ರಾಜ್ಯದ ಮುಂದೆ ಸತ್ಯಾಂಶ ಇಡಲಿದ್ದಾರೆ ಎಂದು ತಿಳಿಸಿದರು.
 
ಇಲ್ಲಿ ಷಡ್ಯಂತ್ರ ನಡೆದಿದೆಯೇ ಎಂದು ಕೇಳಿದಾಗ, “ಈ ವಿಚಾರವನ್ನು ಗೃಹ ಸಚಿವರೇ ವಿವರಿಸಲಿದ್ದಾರೆ. ಮುಖ್ಯಮಂತ್ರಿಗಳಿಗೂ ಈ ವಿಚಾರದಲ್ಲಿ ಬದ್ಧತೆ ಇದೆ. ಯಾರೂ ಕೂಡ ಸುಳ್ಳು, ಷಡ್ಯಂತ್ರ ಮೂಲಕ ಅಪಮಾನ, ಅಪಪ್ರಚಾರ ನಡೆಸುವಂತಿಲ್ಲ ಎಂದು ಸಿಎಂ ನಮಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ತಿಳಿಸಿದ್ದಾರೆ. ಸುಳ್ಳು ಆರೋಪ ಮಾಡಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ನಾವು ನಡೆಯುತ್ತೇವೆ. ಕಾನೂನು ಎಲ್ಲರಿಗೂ ಒಂದೇ. ನಾವು ಅದನ್ನು ಕಾಪಾಡಬೇಕು. ಇಲ್ಲಿ ನಾವು ಯಾರನ್ನೂ ರಕ್ಷಣೆ ಮಾಡುವುದಿಲ್ಲ. ಅನಗತ್ಯವಾಗಿ ಯಾರ ತೇಜೋವಧೆ ಮಾಡುವಂತಿಲ್ಲ” ಎಂದು ತಿಳಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಾಂಕ ಗಾಂಧಿಗೆ ತನ್ನದೇ ಕೈ ಅಡುಗೆ ತಿನಿಸಿದ್ದಲ್ಲದೆ ಕೆಲಸವೂ ಮಾಡಿಕೊಟ್ಟ ನಿತಿನ್ ಗಡ್ಕರಿ: ಅಪರೂಪದ ಕ್ಷಣ video

ಗ್ಯಾರಂಟಿಗಳಿಗೆ ದಲಿತರ 39 ಸಾವಿರ ಕೋಟಿ ರೂಪಾಯಿ ಬಳಕೆಯಾಗಿದೆ: ಛಲವಾದಿ ನಾರಾಯಣಸ್ವಾಮಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಿಮಗೆ ಗೊತ್ತಾ, ಚಳಿಗಾಲದಲ್ಲಿ ಮೂಗಿನ ತುದಿ ಯಾಕೆ ತಣ್ಣಗಿರುತ್ತದೆ

ಮುಂದಿನ ಸುದ್ದಿ
Show comments