Select Your Language

Notifications

webdunia
webdunia
webdunia
webdunia

ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆ: ಶಾಸಕಾಂಗ ಸಭೆಯ ಡೀಟೈಲ್ಸ್ ಇಲ್ಲಿದೆ

Siddaramaiah-DK Shivakumar
ಬೆಂಗಳೂರು: ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆಯಾಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ.

ಸಿದ್ದರಾಮಯ್ಯ ರಾಜೀನಾಮೆ ಬಳಿಕ ಇಂದು ನಡೆಯುತ್ತಿರುವ ಮಹತ್ವದ ಶಾಸಕಾಂಗ ಪಕ್ಷದ ಸಭೆ ಇದಾಗಿದೆ. ಈ ಸಭೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದ್ದು ಇದರೊಂದಿಗೆ ಅವರು ಸಿಎಂ ಆಗುವುದು ಅಧಿಕೃತವಾಗಿದೆ.

ಸಿದ್ದರಾಮಯ್ಯನವರು ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪ ಮಾಡಿದ್ದು ಇದನ್ನು ಹಿರಿಯ ನಾಯಕ ಡಾ ಜಿ ಪರಮೇಶ್ವರ್ ಅನುಮೋದಿಸಿದ್ದಾರೆ. ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪಿಸಿದಾಗ ಎಲ್ಲಾ ಶಾಸಕರೂ ಒಪ್ಪಿಗೆ ಸೂಚಿಸಿದ್ದಾರೆ.  ಶಾಸಕಾಂಗ ಸಭೆಯಲ್ಲಿ ಕಾಂಗ್ರೆಸ್ ನ ಎಲ್ಲಾ ಶಾಸಕರೂ ಹಾಜರಿದ್ದರು. ಈ ಸಭೆಯ ನಂತರ ರಣದೀಪ್ ಸುರ್ಜೇವಾಲ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಯಲಿದೆ. ಈ ಪತ್ರಿಕಾಗೋಷ್ಠಿಯಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಕೂಡಾ ಭಾಗಿಯಾಗಲಿದ್ದಾರೆ. ಈ ವೇಳೆ ನೂತನ ಸಿಎಂ ಪ್ರಮಾಣ ವಚನ ಇತ್ಯಾದಿ ಮಾಹಿತಿಗಳನ್ನು ನೀಡಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗ್ಯಾರಂಟಿ ಫಲಾನುಭವಿಗಳ ಹೆಸರು ಏಕಾಏಕಿ ತೆಗೆದು ಕಿರುಕುಳ ಕೊಡುವುದೇಕೆ: ಡಾ ಸಿಎನ್ ಅಶ್ವತ್ಥ್ ನಾರಾಯಣ ಪ್ರಶ್ನೆ