ಬೆಂಗಳೂರು: ಒಂದೆಡೆ ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಸಿದ್ದು-ಡಿಕೆಶಿ ಬಣದ ನಡುವೆ ಕಿತ್ತಾಟ ನಡೆಯುತ್ತಿದ್ದರೆ ಇತ್ತ ಸ್ವತಃ ಡಿಕೆ ಶಿವಕುಮಾರ್ ಶಾಕಿಂಗ್ ನಿರ್ಧಾರ ಪ್ರಕಟಿಸಿದ್ದಾರೆ.
ಹೈಕಮಾಂಡ್ ನಾಯಕರ ಮೇಲೆ ಒತ್ತಡ ತಂದು, ರಾಜ್ಯ ನಾಯಕರ ಮನವೊಲಿಸಿ ಸುಸ್ತಾದ ಡಿಕೆ ಶಿವಕುಮಾರ್ ಈಗ ನಾನು ಪಕ್ಷದ ಕಾರ್ಯರ್ತನಾಗಿಯೇ ಮುಂದುವರಿಯುತ್ತೇನೆ ಎಂದು ಹೇಳಿದ್ದಾರೆ. ಅವರ ಈ ಹೇಳಿಕೆ ಅಚ್ಚರಿ ಮೂಡಿಸಿದೆ. ಹಾಗಿದ್ದರೆ ಸಿಎಂ ಆಸೆ ಕೈಬಿಟ್ಟರಾ ಎಂಬ ಅನುಮಾನ ಮೂಡಿಸಿದೆ.
ಅಧಿಕಾರ ಹಂಚಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ. ಈ ನಡುವೆ ಸಿದ್ದು ಬಣ ಅಹಿಂದ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಕರ್ನಾಟಕ ಭವನದಲ್ಲಿ ಮಾತನಾಡಿದ ಅವರು ನಾನು ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡಲು ಬಯಸುವುದಿಲ್ಲ. ಪಕ್ಷದ ಕಾರ್ಯಕರ್ತನಾಗಿಯೇ ಮುಂದುವರಿಯುತ್ತೇನೆ ಎಂದಿದ್ದಾರೆ.
ದೆಹಲಿಯಲ್ಲಿ ಯಾರನ್ನೂ ಭೇಟಿ ಮಾಡಲ್ಲ. ರಾಹುಲ್ ಗಾಂಧಿ ವಿದೇಶ ಪ್ರವಾಸ ಮುಗಿಸಿ ಬಂದಿದ್ದಾರೆ. ಹಾಗಿದ್ದರೂ ಅವರಿಗೆ ತೊಂದರೆ ಕೊಡಲು ಬಯಸುವುದಿಲ್ಲ. ಸಿಎಂ ಬದಲಾವಣೆ ಬಗ್ಗೆ ಯಾವುದೇ ಗೊಂದಲಗಳಿಲ್ಲ ಎಂದಿದ್ದಾರೆ.