ಆಪರೇಷನ್ ಕಮಲದ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ರಿಯಾಕ್ಷನ್

Krishnaveni K
ಗುರುವಾರ, 14 ನವೆಂಬರ್ 2024 (12:39 IST)
ಬೆಂಗಳೂರು: ಕಾಂಗ್ರೆಸ್ ಶಾಸಕರನ್ನು ತಮ್ಮತ್ತ ಸೆಳೆಯಲು ಬಿಜೆಪಿ 50 ಕೋಟಿ ರೂ. ಆಫರ್ ನೀಡಿದ್ದಾರೆ ಎಂಬ ಆರೋಪ ಮಾಡಿದ್ದ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ನಿನ್ನೆ ಕಾರ್ಯಕ್ರಮವೊಂದದರಲ್ಲಿ ಮಾತನಾಡುವಾಗ ಸಿಎಂ ಸಿದ್ದರಾಮಯ್ಯ ಬಿಜೆಪಿ ಆಪರೇಷನ್ ಕಮಲದ ಬಗ್ಗೆ ಗಂಭೀರ ಆರೋಪ ಮಾಡಿದ್ದರು. ಬಿಜೆಪಿಯವರು ಹೇಗಾದರೂ ಮಾಡಿ ನಮ್ಮ ಸರ್ಕಾರ ಉರುಳಿಸಬೇಕು ಎಂದು ಪ್ರಯತ್ನ ನಡೆಸುತ್ತಿದ್ದಾರೆ. ನಮ್ಮ ಶಾಸಕರಿಗೆ 50 ಕೋಟಿ ರೂ. ಆಫರ್ ನೀಡಿದ್ದರು. ಅದು ಸಫಲರಾಗದೇ ಇದ್ದಾಗ ನನ್ನ ಮೇಲೆ ಸುಳ್ಳು ಕೇಸ್ ಹಾಕಿ ಅಲುಗಾಡಿಸುವ ಪ್ರಯತ್ನ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದರು.

ಸಿದ್ದರಾಮಯ್ಯ ಆರೋಪಕ್ಕೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ‘ಹೌದು. ಬಿಜೆಪಿಯವರು ನಮ್ಮ ಶಾಸಕರಿಗೆ ಹಣದ ಆಮಿಷವೊಡ್ಡಿ ಖರೀದಿಸಲು ಪ್ರಯತ್ನ ಮಾಡಿದ್ದಾರೆ. ಆ ಕಾಂಗ್ರೆಸ್ ಶಾಸಕರು ಇದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ. ಅದನ್ನೇ ಮುಖ್ಯಮಂತ್ರಿಗಳು ನಿಮಗೆ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಇನ್ನಷ್ಟು ಹೇಳುತ್ತೇನೆ’ ಎಂದು ಡಿಕೆಶಿ ಹೇಳಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ್ದ ಸಚಿವ ರಾಜಣ್ಣ ಕೂಡಾ ಸಿದ್ದರಾಮಯ್ಯನವರೇ ಹೇಳಿದ್ದಾರೆ ಎಂದರೆ ಅದು ಸತ್ಯವಿರಲೇಬೇಕು ಎಂದಿದ್ದಾರೆ. ಆದರೆ ಸಚಿವ ಸತೀಶ್ ಜಾರಕಿಹೊಳಿ 50 ಕೋಟಿ ಆಫರ್ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments