Publish Date: Fri, 19 Dec 2025 (14:55 IST)
Updated Date: Fri, 19 Dec 2025 (14:57 IST)
ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ನಡೆದ ಡಿನ್ನರ್ ಮೀಟಿಂಗ್ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಶಾಕಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.
ನಿನ್ನೆ ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಎಂ ಸಿದ್ದರಾಮಯ್ಯ ಬಣ ಡಿನ್ನರ್ ಮೀಟಿಂಗ್ ನಡೆಸಿತ್ತು. ಈ ಮೀಟಿಂಗ್ ನಲ್ಲಿ ಯಾವುದೇ ಕಾರಣಕ್ಕೂ ಸಿಎಂ ಸ್ಥಾನ ಬಿಟ್ಟುಕೊಡಬೇಡಿ ಎಂದು ಸಿದ್ದರಾಮಯ್ಯಗೆ ಆಪ್ತರು ಒತ್ತಾಯಿಸಿದ್ದಾರೆ ಎನ್ನಲಾಗುತ್ತಿದೆ.
ಈ ಔತಣ ಕೂಟಕ್ಕೆ ಡಿಕೆ ಶಿವಕುಮಾರ್ ಗೆ ಆಹ್ವಾನವಿರಲಿಲ್ಲ. ಈ ಮೀಟಿಂಗ್ ಬಗ್ಗೆ ಪ್ರತಿಕ್ರಿಯಿಸಿರುವ ಡಿಕೆಶಿ ಒಟ್ಟಿಗೆ ಸೇರಿ ಊಟ ಮಾಡುವುದನ್ನು ಬೇಡ ಎನ್ನಲು ಸಾಧ್ಯವೇ? ಹೊರಗಡೆಯಿಂದ ಬಂದಿದ್ದೀವಿ. ಎಲ್ಲಾ ಸೇರಿ ಊಟ ಮಾಡಿದ್ರೆ ತಪ್ಪೇನಿದೆ ಎಂದು ಮಾಧ್ಯಮಗಳನ್ನೇ ಪ್ರಶ್ನೆ ಮಾಡಿದ್ದಾರೆ.
ಊಟ ಮಾಡಿದ್ದರಲ್ಲಿ ತಪ್ಪು ಹುಡುಕಬೇಡಿ. ಅಲ್ಲಿ ಎಷ್ಟೇ ಜನ ಸೇರಿದ್ದರೂ ನನಗೇನು. ನನ್ನನ್ನು ಯಾಕೆ ಈ ಪ್ರಶ್ನೆ ಕೇಳ್ತೀರಿ ಎಂದು ಮಾಧ್ಯಮಗಳ ಮೇಲೆಯೇ ಡಿಕೆಶಿ ಗರಂ ಆಗಿದ್ದಾರೆ. ಡಿಕೆ ಶಿವಕುಮಾರ್ ಇಂದು ಅಂಕೋಲದ ಜಗದೀಶ್ವರಿ ದೇವಿ ಸನ್ನಿಧಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ.