Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಸಿಎಂ ಆಗಿ ದಾಖಲೆ ಮಾಡಿದ ದಿನವೇ ಕುರ್ಚಿ ಬದಲಾವಣೆ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಮಾತು

DK Shivakumar
ಬೆಂಗಳೂರು: ಸಿಎಂ ಆಗಿ ಸಿದ್ದರಾಮಯ್ಯ ದಾಖಲೆ ಮಾಡಿದ ದಿನವೇ ಡಿಕೆ ಶಿವಕುಮಾರ್ ನಾಯಕತ್ವ ಬದಲಾವಣೆ ವಿಚಾರವಾಗಿ ಶಾಕಿಂಗ್ ಹೇಳಿಕೆ ನೀಡಿದ್ದಾರೆ.

 ಸಿಎಂ ಆಗಿ ಸಿದ್ದರಾಮಯ್ಯ ಇಂದು 2794 ದಿನಗಳನ್ನು ಪೂರ್ತಿ ಮಾಡಿ ದೇವರಾಜ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ಮೂಲಕ ಕರ್ನಾಟಕದ ಅತೀ ದೀರ್ಘ ಕಾಲದ ಮುಖ್ಯಮಂತ್ರಿ ಎನಿಸಿಕೊಂಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸುವಾಗ ಸಿದ್ದರಾಮಯ್ಯ ಸಿಎಂ ಆಗಿ ಪೂರ್ಣಾವಧಿ ಪೂರೈಸುವ ವಿಶ್ವಾಸವಿದೆ ಎಂದಿದ್ದರು.

ಇದರ ಬಗ್ಗೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಗೆ ಮಾಧ್ಯಮಗಳು ಪ್ರಶ್ನೆ ಮಾಡಿವೆ. ಸಿದ್ದರಾಮಯ್ಯನವರು ನಾನೇ ಐದು ವರ್ಷ ಸಿಎಂ ಅಂತಿದ್ದಾರೆ. ಇದಕ್ಕೆ ನೀವೆನಂತೀರಿ ಎಂದು ಮಾಧ್ಯಮಗಳು ಪ್ರಶ್ನೆ ಮಾಡಿವೆ. ಇದಕ್ಕೆ ಪ್ರತಿಕ್ರಿಯಿಸಿರುವ ಅವರು ಅವರಿಗೆ ಶುಭವಾಗಲಿ ಎಂದಿದ್ದಾರೆ.

‘ಬಹಳ ಸಂತೋಷ. ನಾನು ಅವರಿಗೆ ಶುಭ ಹಾರೈಸುತ್ತೇನೆ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ನೀವೇ ಗೊಂದಲ ಸೃಷ್ಟಿಸುತ್ತಿದ್ದೀರಿ’ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮುಖ್ಯಮಂತ್ರಿಯಾಗಿ ದಾಖಲೆ ಮಾಡಿದ ದಿನವೇ ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ