Daily Horoscope

Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಭವಿಷ್ಯ ಇಂದು ತೀರ್ಮಾನಿಸಲಿದ್ದಾರೆ ಈ ನಾಲ್ವರು

DK Shivakumar-Mallikarjun Kharge
ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಫೈಟ್ ನಡೆಯುತ್ತಿದೆ. ಇದರ ನಡುವೆ ಇಂದು ದೆಹಲಿಯಲ್ಲಿ ಈ ನಾಲ್ವರು ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಭವಿಷ್ಯ ತೀರ್ಮಾನಿಸಲಿದ್ದಾರೆ.

ಅಧಿಕಾರ ಹಂಚಿಕೆ ವಿಚಾರದಲ್ಲಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಪಟ್ಟು ಬಿಡುತ್ತಿಲ್ಲ. ರಾಜ್ಯಕ್ಕೆ ಬಂದಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಲ್ಲಿನ ನಾಯಕರೊಂದಿಗೆ ಮಾತುಕತೆ ನಡೆಸಿ ದೆಹಲಿಗೆ ತೆರಳಿದ್ದಾರೆ.

ಇಂದು ದೆಹಲಿಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ರಾಹುಲ್ ಗಾಂಧಿ ಜೊತೆಗೆ ಮಲ್ಲಿಕಾರ್ಜುನ ಖರ್ಗೆ, ರಣದೀಪ್ ಸುರ್ಜೇವಾಲ ಮತ್ತು ಕೆಸಿ ವೇಣುಗೋಪಾಲ್ ಸೇರಿದಂತೆ ನಾಲ್ವರು ಮಹತ್ವದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಕರ್ನಾಟಕದ ಅಧಿಕಾರ ಹಂಚಿಕೆ ವಿಚಾರದ ಬಗ್ಗೆ ತೀರ್ಮಾನವಾಗಲಿದೆ.

ಇದೇ ವಾರಂತ್ಯಕ್ಕೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ರನ್ನು ದೆಹಲಿಗೆ ಕರೆಸಿಕೊಂಡು ಇಂದಿನ ಸಭೆಯಲ್ಲಿ ಆದ ತೀರ್ಮಾನಗಳ ಬಗ್ಗೆ ತಿಳಿಸಲಿದ್ದಾರೆ. ಹೀಗಾಗಿ ಇಂದಿನ ನಾಲ್ವರು ಪ್ರಮುಖರ ಸಭೆ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಹಣೆ ಬರಹ ನಿರ್ಧರಿಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಬಿಜೆಪಿ, ಜೆಡಿಎಸ್ ಗೆ ಮಹತ್ವದ ಸಂದೇಶ ಕೊಟ್ಟ ಡಿಕೆ ಶಿವಕುಮಾರ್