ಚೊಂಬು ನೋಡಿ ಸಹಿಸಲಾಗದೇ ಪಿಕ್ ಪಾಕೆಟ್ ಜಾಹೀರಾತು ಕೊಟ್ಟಿದ್ದಾರೆ: ಡಿಕೆ ಶಿವಕುಮಾರ್

Krishnaveni K
ಮಂಗಳವಾರ, 23 ಏಪ್ರಿಲ್ 2024 (12:50 IST)
ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ಸೋಷಿಯಲ್ ಮೀಡಿಯಾದಲ್ಲೂ ವಾರ್ ಜೋರಾಗಿ ನಡೆದಿದೆ.

ಇತ್ತೀಚೆಗೆ ಕಾಂಗ್ರೆಸ್ ಕೇಂದ್ರದ ಮೋದಿ ಸರ್ಕಾರ ಭರವಸೆ ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಚೊಂಬು ಅಭಿಯಾನ ಆರಂಭಿಸಿತ್ತು. ಇದಕ್ಕೆ ಪ್ರತಿಯಾಗಿ ರಾಜ್ಯ ಬಿಜೆಪಿ ಘಟಕ ಕಾಂಗ್ರೆಸ್ ವಿರುದ್ಧ ಚಿಪ್ಪು ಮತ್ತು ಪಿಕ್ ಪಾಕೆಟ್ ಅಭಿಯಾನ ಆರಂಭಿಸಿದೆ. ಜನರಿಗೆ ಗ್ಯಾರಂಟಿ ಭರವಸೆ ನೀಡಿ ಕೊನೆಗೆ ರಾಜ್ಯ ಸರ್ಕಾರ ಕೈಗೆ ಚಿಪ್ಪು ನೀಡಿದೆ, ಜನರಿಗೆ ಕೊಟ್ಟ ಭರವಸೆ ಈಡೇರಿಸಲು ಜನರ ಜೇಬಿಗೇ ಕೈ ಹಾಕಿ ಪಿಕ್ ಪಾಕೆಟ್ ಮಾಡುತ್ತಿದೆ ಎಂದು ತಿರುಗೇಟು ಕೊಟ್ಟಿತ್ತು.

ಇದೀಗ ಬಿಜೆಪಿಯ ಚಿಪ್ಪು ಮತ್ತು ಪಿಕ್ ಪಾಕೆಟ್‍ ಅಭಿಯಾನಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ನಮ್ಮ ಚೊಂಬು ಜಾಹೀರಾತು ನೋಡಿ ಸಹಿಸಲಾಗದೇ ಬಿಜೆಪಿಯವರು ಪಿಕ್ ಪಾಕೆಟ್ ಅಭಿಯಾನ ಶುರು ಮಾಡಿಕೊಂಡಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ನಾವು ಪಿಕ್ ಪಾಕೆಟ್ ಮಾಡಿದ್ದೇವೆ ಎಂದು ಬಿಜೆಪಿಯವರು ಜಾಹೀರಾತು ಹಾಕಿದ್ದಾರೆ. ಬಿಜೆಪಿಯವರು ಪಿಕ್ ಪಾಕೆಟ್ ಮಾಡಿ ನಮ್ಮ ಮೇಲೆ ಹಾಕುತ್ತಿದ್ದಾರೆ. ಬಿಜೆಪಿಯವರಿಗೆ ಚೊಂಬು ಅಭಿಯಾನವನ್ನು ಅರಗಿಸಿಕೊಳ್ಳಲು ಆಗ್ತಿಲ್ಲ.  ಬರ ಪರಿಹಾರ ನೀಡುತ್ತೇವೆ ಎಂದು ಕೇಂದ್ರ ಹೇಳಿದೆ, ನಮಗೆ ಪರಿಹಾರ ಸಿಗುತ್ತೆ. ಈಗ ಸಾಂಕೇತಿಕವಾಗಿ ಹೋರಾಟ ಮುಂದುವರಿಸಿದ್ದೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಶ್ರಫ್ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ಭರತ್‌ಗೆ ಬಿಗ್ ಶಾಕ್

ಐಷರಾಮಿ ಕಾರಿಗೆ ಬೇಡಿಕೆಯಿಟ್ಟ ಮಗ, ಕಬ್ಬಿಣದ ಸರಳಿನಿಂದ ಹೊಡೆದ ಅಪ್ಪನ ವಿರುದ್ಧ ಬಿತ್ತು ದೊಡ್ಡ ಕೇಸ್

ಬೆಂಗಳೂರಿನಲ್ಲಿ ಟ್ರಾಫಿಕ್ ಇರೋದು ಒಳ್ಳೇದು ಅನ್ನೋದಾ ಸಚಿವ ಪ್ರಿಯಾಂಕ್ ಖರ್ಗೆ

ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿ ಗಣತಿ: ವಿಜಯೇಂದ್ರ

ಶಾಂತಿ ನೊಬೆಲ್‌ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಡೊನಾಲ್ಡ್‌ ಟ್ರಂಪ್‌ಗೆ ನಿರಾಸೆ: ಸಿಕ್ಕಿದ್ದು ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments