Select Your Language

Notifications

webdunia
webdunia
webdunia
webdunia

ಚುನಾವಣೆ ಮುಗಿದ ಬೆನ್ನಲ್ಲೇ ರೆಸಾರ್ಟ್ ಗೆ ತೆರಳಿದ ಡಿಕೆ ಶಿವಕುಮಾರ್

DK Shivakumar
ಬೆಂಗಳೂರು: ಚುನಾವಣೆ ಮುಗಿದ ಬೆನ್ನಲ್ಲೇ ರಾಜಕೀಯ ನಾಯಕರು ರಿಲ್ಯಾಕ್ಸ್ ಮಾಡುತ್ತಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕುಟುಂಬ ಸಮೇತರಾಗಿ ಚಿಕ್ಕಮಗಳೂರಿಗೆ ತೆರಳಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಡಿಕೆ ಶಿವಕುಮಾರ್ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದರು. ಹೀಗಾಗಿ ಬಿಡುವಿಲ್ಲದೇ ಊರೂರು ಸುತ್ತಿ ಸುಸ್ತಾಗಿರುವ ಡಿಕೆಶಿ ಈಗ ಕುಟುಂಬ ಸಮೇತರಾಗಿ ರಿಲ್ಯಾಕ್ಸ್ ಆಗಲು ರೆಸಾರ್ಟ್ ಮೊರೆ ಹೋಗಿದ್ದಾರೆ. ಮುಂದಿನ ಎರಡು ದಿನಗಳ ಕಾಲ ಡಿಕೆಶಿ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಮೇಲೆ ವಕೀಲ ಹಾಗೂ ಬಿಜೆಪಿ ನಾಯಕ ದೇವರಾಜೇಗೌಡ ಪೆನ್ ಡ್ರೈವ್  ಹಂಚಿದ ಆರೋಪ ಮಾಡಿದ್ದರು. ಪೆನ್ ಡ್ರೈವ್ ಮಾಡಿಸಿದವರು ಯಾರು ಎಂದು ತನಿಖೆಯಾಗಲಿ ಎಂದು ಆಗ್ರಹಿಸಿದ್ದರು.

ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಡಿಕೆ ಶಿವಕುಮಾರ್ ಈಗ ರಾಜಕೀಯಗಳಿಂದ ಕೊಂಚ ಬಿಡುವು ಪಡೆದು ಕುಟುಂಬದ ಕಾಲ ಕಳೆಯಲು ನಿರ್ಧರಿಸಿದ್ದಾರೆ. ಇಂದು ಕರ್ನಾಟಕದಲ್ಲಿ ಎರಡನೇ ಹಂತದ ಚುನಾವಣೆ ನಡೆಯುತ್ತಿದೆ. ಇದಾದ ಬಳಿಕ ರಾಜ್ಯ ನಾಯಕರಿಗೆ ವಿರಾಮ ಸಿಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಪ್ರಧಾನಿ ಮೋದಿ