Publish Date: Thu, 05 Sep 2019 (10:18 IST)
Updated Date: Thu, 05 Sep 2019 (10:21 IST)
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಬೆಂಬಲಿಗರು ಇದೀಗ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ.
ನವದೆಹಲಿಯಲ್ಲಿ ನಿನ್ನೆ ವಿಶೇಷ ಕೋರ್ಟ್ ಗೆ ಹಾಜರಾದ ಡಿಕೆ ಶಿವಕುಮಾರ್ ರನ್ನು ಸೆಪ್ಟೆಂಬರ್ 13 ರವರೆಗೂ ಇಡಿ ಸುಪರ್ದಿಗೆ ಒಪ್ಪಿಸಲಾಗಿತ್ತು. ಈ ಹಿನ್ನಲೆಯಲ್ಲಿ ಇದೆಲ್ಲಾ ಕೇಂದ್ರ ಸರ್ಕಾರದ ಪಿತೂರಿ ಎಂದು ಡಿಕೆಶಿ ಬೆಂಬಲಿಗರು ನಿನ್ನೆ ಕನಕಪುರ ಸುತ್ತಮುತ್ತಲ ಪ್ರದೇಶದಲ್ಲಿ ಪ್ರತಿಭಟನೆ ನಡೆಸಿದ್ದರು.
ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರ ಡಾಲರ್ಸ್ ಕಾಲೊನಿ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲು ಡಿಕೆಶಿ ಬೆಂಬಲಿಗರು ಸಿದ್ಧತೆ ನಡೆಸಿದ್ದಾರೆ. ಈ ಹಿನ್ನಲೆಯಲ್ಲಿ ಸಿಎಂ ನಿವಾಸಕ್ಕೆ ಭದ್ರತೆ ಹೆಚ್ಚಿಸಲಾಗಿದೆ.