Publish Date: Thu, 28 May 2026 (19:14 IST)
Updated Date: Thu, 28 May 2026 (19:16 IST)
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಲೇ ಇಂದು ರಾತ್ರಿ ದಿಡೀರ್ ಆಗಿ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಡಿಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಎಂದು ಈಗಾಗಲೇ ಸ್ವತಃ ಸಿದ್ದರಾಮಯ್ಯನವರೇ ಘೋಷಣೆ ಮಾಡಿದ್ದಾರೆ. ಇಂದು ಸಂಜೆ ಡಿಕೆಶಿ ಸೇರಿದಂತೆ ಪ್ರಮುಖ ಸಚಿವರ ಜೊತೆ ಲೋಕಭವನಕ್ಕೆ ತೆರಳಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇದೀಗ ಡಿಕೆಶಿ ಯಾವಾಗ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಎಲ್ಲರೂ ಎದಿರು ನೋಡುತ್ತಿದ್ದಾರೆ. ಈ ನಡುವೆ ಇಂದು ಅವರು ರಾತ್ರಿ ದೆಹಲಿಗೆ ತೆರಳಲಿದ್ದು, ನಾಳೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆ ಮಾತುಕತೆ ನಡೆಸಲಿದ್ದಾರೆ.
ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಬಗ್ಗೆ ಮತ್ತು ಸಚಿವ ಸಂಪುಟ ಪುನರಾರಚನೆ ಬಗ್ಗೆ ಹೈಕಮಾಂಡ್ ನಾಯಕರ ಜೊತೆ ಮಾತುಕತೆ ನಡೆಸುವ ಸಾಧ್ಯತೆಯಿದೆ. ಇದಾದ ಬಳಿಕ ಡಿಕೆಶಿ ಪ್ರಮಾಣ ವಚನ ಯಾವಾಗ ಎಂದು ಅಧಿಕೃತವಾಗಿ ತಿಳಿದುಬರಲಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ