Webdunia - Bharat's app for daily news and videos

Install App

ನನಗೂ ಶಿವಕುಮಾರ ಎಂದು ಹೆಸರಿಟ್ಟಿದ್ದು ನನ್ನ ಭಾಗ್ಯ ಎಂದ ಡಿಕೆಶಿ: ಅಬ್ಬಾ ಎಂಥಾ ಹೋಲಿಕೆ ಎಂದ ಜನ

Krishnaveni K
ಮಂಗಳವಾರ, 1 ಏಪ್ರಿಲ್ 2025 (17:09 IST)
ತುಮಕೂರು: ತ್ರಿವಿಧ ದಾಸೋಹಿ ದಿವಂಗತ ಶಿವಕುಮಾರ ಸ್ವಾಮೀಜಿಗಳ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಇಂದು ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಡಿಕೆಶಿ ಶಿವಕುಮಾರ ಸ್ವಾಮೀಜಿಗಳ ಬಗ್ಗೆ ಮಾತನಾಡುತ್ತಾ ನನಗೂ ನನ್ನ ತಂದೆ ತಾಯಿ ನನ್ನ ಭಾಗ್ಯ ಎಂದರು. ಅವರ ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ನೆಟ್ಟಿಗರು ಅಬ್ಬಾ ಎಂಥಾ ಹೋಲಿಕೆ ಎಂದು ವ್ಯಂಗ್ಯ ಮಾಡಿದ್ದಾರೆ.

ಇಂದು ಸಿದ್ಧಗಂಗಾ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಅವರು ‘ಶ್ರೀಗಳು ಹಾಕಿಕೊಟ್ಟ ದಾರಿ, ಅವರ ನುಡಿಮುತ್ತುಗಳು ನಮ್ಮ ಬದುಕಿಗೆ ದೊಡ್ಡ ಶಕ್ತಿ’ ಎಂದರು.

‘ಈ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದೇ ನನ್ನ ಭಾಗ್ಯ. ನನ್ನತಂದೆ ತಾಯಿಯವರು ನನಗೆ ಶಿವಕುಮಾರ ಎಂದು ಹೆಸರಿಟ್ಟಿದ್ದು ನನ್ನ ಭಾಗ್ಯ. ಇಂದು ನಾವು ಒಬ್ಬ ದೇವನ ಸ್ವರೂಪಿಯನ್ನು ಸ್ಮರಿಸುವ ಭಾಗ್ಯ ದೊರೆತಿದೆ’ ಎಂದಿದ್ದಾರೆ.

ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ನೆಟ್ಟಿಗರು ಎಂಥಾ ಹೋಲಿಕೆ. ನಂದೇನಿಲ್ಲ ಎನ್ನುವ ಸ್ವಾಮೀಜಿಗಳು ಎಲ್ಲಿ ಎಲ್ಲವೂ ನಂದೇ ಎನ್ನುವ ಡಿಕೆಶಿ ಎಲ್ಲಿ ಎಂದು ಕೆಲವರು ವ್ಯಂಗ್ಯ ಮಾಡಿದ್ದಾರೆ. ಶಿವ ಎಂಬ ಹೆಸರಿಟ್ಟ ಮಾತ್ರಕ್ಕೆ ಎಲ್ಲರೂ ದೇವರಾಗಲ್ಲ. ಹೆಸರು ಇಟ್ಟುಕೊಂಡ ತಕ್ಷಣ ಎಲ್ಲರೂ ಶಿವಕುಮಾರಸ್ವಾಮೀಜಿ ಆಗಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments