Publish Date: Fri, 20 Feb 2026 (09:04 IST)
Updated Date: Fri, 20 Feb 2026 (09:07 IST)
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ನಿನ್ನೆ ಕಾಂಗ್ರೆಸ್ ಹೈಕಮಾಂಡ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಜೊತೆ ಅಸ್ಸಾಂನ ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ್ದಾರೆ. ಇದಕ್ಕೆ ನೆಟ್ಟಿಗರು ಸಾಕಷ್ಟು ಇಂಟ್ರೆಸ್ಟಿಂಗ್ ಕಾಮೆಂಟ್ ಮಾಡಿದ್ದಾರೆ.
ಅಸ್ಸಾಂ ಚುನಾವಣೆ ಸಿದ್ಧತೆ ಕುರಿತು ಎಐಸಿಸಿ ಸಭೆಯಲ್ಲಿ ಪಾಲ್ಗೊಳ್ಳಲು ಅಸ್ಸಾಂಗೆ ತೆರಳಿದ್ದ ಡಿಕೆ ಶಿವಕುಮಾರ್ ಇದೇ ವೇಳೆ ಪ್ರಿಯಾಂಕ ಗಾಂಧಿ ವಾದ್ರಾ ಜೊತೆ ಅಲ್ಲಿನ ಇತಿಹಾಸ ಪ್ರಸಿದ್ಧ ಕಾಮಾಕ್ಯ ದೇವಿ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಈ ಕ್ಷಣಗಳನ್ನು ಡಿಕೆಶಿ ತಮ್ಮ ಸೋಷಿಯಲ್ ಮೀಡಿಯಾ ಪುಟದಲ್ಲಿ ಹಂಚಿಕೊಂಡಿದ್ದಾರೆ. ಕಾಮಾಕ್ಯ ಮಂದಿರಕ್ಕೆ ಸಾಂಪ್ರದಾಯಿಕ ಉಡುಗೆಯಲ್ಲಿ ಭೇಟಿ ಕೊಟ್ಟ ಡಿಕೆಶಿ ಬಳಿಕ ಅಲ್ಲಿ ವಿಶೇಷ ಪೂಜೆಯನ್ನೂ ನೆರವೇರಿಸಿದ್ದಾರೆ.
ಇದಕ್ಕೆ ಕಾಮೆಂಟ್ ಮಾಡಿರುವ ನೆಟ್ಟಿಗರು ಡಿಕೆ ಸಾಹೇಬ್ರೇ ಹಾಗೇ ದೇವಿ ಬಳಿ ಸಿಎಂ ಮಾಡು ಎಂದು ಕೇಳಿಕೊಂಡ್ರಾ ಎಂದು ಕಾಲೆಳೆದಿದ್ದಾರೆ. ಇನ್ನು ಕೆಲವರು ದೇವರ ಆಶೀರ್ವಾದಿಂದ ನೀವು ಬೇಗ ಸಿಎಂ ಆಗಿ ಎಂದು ಹಾರೈಸಿದ್ದಾರೆ. ಕಾಮಾಕ್ಯ ದೇವಸ್ಥಾನಕ್ಕೆ ಹೋಗ್ತಾರೆ ಎಂದರೆ ಅತೀ ಶೀಘ್ರದಲ್ಲಿ ಸಿಎಂ ಆಗ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.